August 25, 2026
Tuesday, August 25, 2026
spot_img

60+ ಮಹಿಳೆಯರಿಗೆ ‘ಫ್ರೀ ಬಸ್‌’ ಗಿಫ್ಟ್: ಜೀವಿತಾವಧಿ ಉಚಿತ ಪ್ರಯಾಣಕ್ಕೆ ಕ್ಯಾಬಿನೆಟ್ ಅಸ್ತು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉತ್ತರ ಪ್ರದೇಶದ 60 ವರ್ಷ ಅಥವಾ ಅದಕ್ಕಿಂತ ಮೇಲ್ಪಟ್ಟ ಮಹಿಳೆಯರಿಗೆ ಜೀವಿತಾವಧಿವರೆಗೆ ಉಚಿತ ಬಸ್‌ ಪ್ರಯಾಣ ಕಲ್ಪಿಸುವ ‘ಲೋಕಮಾತಾ ಅಹಲ್ಯಾಬಾಯಿ ಮಾತೃಶಕ್ತಿ ಯೋಜನೆ’ಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.

ಜೀವಿತಾವಧಿ ಉಚಿತ ಪ್ರಯಾಣ

ಯೋಜನೆಯಡಿ ಉತ್ತರ ಪ್ರದೇಶ ರಾಜ್ಯ ರಸ್ತೆ ಸಾರಿಗೆ ನಿಗಮ (UPSRTC) ನಿರ್ವಹಿಸುವ ಎಲ್ಲಾ ಬಸ್‌ಗಳಲ್ಲಿ 60 ವರ್ಷ ಮೇಲ್ಪಟ್ಟ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದಾಗಿದೆ. ಈ ಸೌಲಭ್ಯ ಉತ್ತರ ಪ್ರದೇಶದ ಮಹಿಳೆಯರಿಗೆ ಮಾತ್ರ ಅನ್ವಯವಾಗಲಿದೆ.

ಒಂದು ಕೋಟಿಗೂ ಅಧಿಕ ಮಹಿಳೆಯರಿಗೆ ಲಾಭ

ರಾಜ್ಯ ಸಾರಿಗೆ ಸಚಿವ ದಯಾಶಂಕರ್ ಸಿಂಗ್‌ ಮಾತನಾಡಿ, ರಾಜ್ಯದ 1 ಕೋಟಿಗೂ ಹೆಚ್ಚು ಮಹಿಳೆಯರು ಈ ಯೋಜನೆಯ ಪ್ರಯೋಜನ ಪಡೆಯಲಿದ್ದಾರೆ ಎಂದು ತಿಳಿಸಿದ್ದಾರೆ. ಉಚಿತ ಪ್ರಯಾಣದ ವೇಳೆ ವೋಟರ್‌ ಐಡಿ, ಆಧಾರ್‌ ಕಾರ್ಡ್‌ ಸೇರಿದಂತೆ ಯಾವುದೇ ಮಾನ್ಯ ಗುರುತಿನ ದಾಖಲೆ ತೋರಿಸುವುದು ಕಡ್ಡಾಯವಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ:

ಗಂಗಾ ಎಕ್ಸ್‌ಪ್ರೆಸ್‌ವೇ ವಿಸ್ತರಣೆಗೆ ಗ್ರೀನ್ ಸಿಗ್ನಲ್

ಸಚಿವ ಸಂಪುಟ ಸಭೆಯಲ್ಲಿ ಗಂಗಾ ಎಕ್ಸ್‌ಪ್ರೆಸ್‌ವೇಯನ್ನು ಉತ್ತರಾಖಂಡದ ಹರಿದ್ವಾರದವರೆಗೆ ವಿಸ್ತರಿಸುವ ಪ್ರಸ್ತಾಪಕ್ಕೂ ಅನುಮೋದನೆ ನೀಡಲಾಗಿದೆ. ಸುಮಾರು 10,761 ಕೋಟಿ ರೂ ವೆಚ್ಚದಲ್ಲಿ ಯೋಜನೆ ಕೈಗೆತ್ತಿಕೊಳ್ಳಲಾಗಿದೆ.

24 ಪ್ರಮುಖ ಪ್ರಸ್ತಾಪಗಳಿಗೆ ಅನುಮೋದನೆ

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಉಚಿತ ಬಸ್‌ ಯೋಜನೆ ಸೇರಿದಂತೆ ಒಟ್ಟು 24 ಪ್ರಮುಖ ಪ್ರಸ್ತಾಪಗಳಿಗೆ ಅನುಮೋದನೆ ನೀಡಲಾಗಿದೆ. ವೃದ್ಧ ಮಹಿಳೆಯರಿಗೆ ಪ್ರಯಾಣದ ಅನುಕೂಲ ಕಲ್ಪಿಸುವ ಈ ಯೋಜನೆ ರಾಜ್ಯ ಸರ್ಕಾರದ ಪ್ರಮುಖ ನಿರ್ಧಾರಗಳಲ್ಲಿ ಒಂದಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !