ಹೊಸದಿಗಂತ ಡಿಜಿಟಲ್ ಡೆಸ್ಕ್:
ನೇಪಾಳ–ಟಿಬೆಟ್ ಗಡಿಭಾಗದ ಹಿಮಾಲಯ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಇದರಿಂದ ಹಲವು ಕಡೆ ಪ್ರವಾಹದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ನದಿಗಳಲ್ಲಿ ನೀರು ಹೆಚ್ಚಾಗಿ, ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಪ್ರವಾಹ ಮತ್ತು ಮಣ್ಣು ಕುಸಿತದಿಂದ ಕನಿಷ್ಠ ಎಂಟು ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಅಷ್ಟೇ ಅಲ್ಲದೆ ಹಲವು ಮನೆಗಳು, ರಸ್ತೆಗಳು ಮತ್ತು ಸೇತುವೆಗಳಿಗೆ ಹಾನಿಯಾಗಿದ್ದು, ವಿದ್ಯುತ್ ಯೋಜನೆಗಳಿಗೂ ತೊಂದರೆಯಾಗಿದೆ. ಟಿಬೆಟ್ನ ಗೈರಾಂಗ್ ಪ್ರದೇಶದಲ್ಲೂ ಮಣ್ಣು ಕುಸಿತವಾಗಿದ್ದು, ರಸ್ತೆ ಮತ್ತು ಸಂಪರ್ಕ ವ್ಯವಸ್ಥೆ ಹಾಳಾಗಿದೆ.
ರಕ್ಷಣೆಗೆ ಬಂದ ಹೆಲಿಕಾಪ್ಟರ್
ಅಪಾಯದಂಚಿನಲ್ಲಿರುವ ನದಿ ತೀರದ ಹಾಗೂ ತಗ್ಗು ಪ್ರದೇಶದಲ್ಲಿರುವ ಸಂತ್ರಸ್ತರನ್ನು ರಕ್ಷಿಸಲು ನೇಪಾಳ ಸರ್ಕಾರ ಮತ್ತು ಸೇನಾ ಹೆಲಿಕಾಪ್ಟರ್ಗಳು ಮುಂದಾಗಿವೆ. ಪ್ರವಾಹದಲ್ಲಿ ಸಿಲುಕಿರುವ ಜನರಿಗೆ ಆಹಾರ, ಕುಡಿಯುವ ನೀರು ಮತ್ತು ಔಷಧಿ ತಲುಪಿಸಲಾಗುತ್ತಿದ್ದು. ರಕ್ಷಣಾ ತಂಡಗಳು ಹಗಲು-ರಾತ್ರಿ ಎನ್ನದೆ ಶ್ರಮ ವಹಿಸುತ್ತಿದೆ.
ಸಾರ್ವಜನಿಕರ ಸೇಫ್ಟಿ ಮೊದಲು
ನದಿ ತೀರ ಮತ್ತು ತಗ್ಗು ಪ್ರದೇಶಗಳಲ್ಲಿರುವ ಜನರನ್ನು ಸುರಕ್ಷಿತ ಸ್ಥಳಗಳಿಗೆ ರವಾನಿಸಲಾಗುತ್ತಿದೆ. ಸ್ಥಳೀಯ ಅಧಿಕಾರಿಗಳು ಮತ್ತು ಭದ್ರತಾ ಸಿಬ್ಬಂದಿ ಹಾಗೂ ಸ್ಥಳೀಯರು ಒಟ್ಟಾಗಿ ಕೆಲಸ ಮಾಡುತ್ತಿದ್ದು, ರಕ್ಷಣಾ ಕಾರ್ಯ ಮುಂದುವರಿದಿದೆ.



