August 26, 2026
Wednesday, August 26, 2026
spot_img

ಭೀಕರ ಪ್ರವಾಹಕ್ಕೆ ನೇಪಾಳ ತತ್ತರ: ಕೈಲಾಸ ಯಾತ್ರೆಗೆ ತೆರಳಿದ್ದ 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ನೇಪಾಳ- ಟಿಬೆಟ್ ಗಡಿ ಭಾಗದಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದಾಗಿ ನೇಪಾಳದ ರಸುವಾ, ನುವಾಕೋಟ್ ಮತ್ತು ಧಾದಿಂಗ್ ಜಿಲ್ಲೆಗಳು ಸಂಪೂರ್ಣ ತತ್ತರಿಸಿವೆ. ಈ ಜಲಪ್ರಳಾಯಕ್ಕೆ ಸಿಲುಕಿ ಈಗಾಗಲೇ ಕನಿಷ್ಠ 19 ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಕೈಲಾಸ ಮಾನಸಸರೋವರ ಯಾತ್ರಿಕರು ನಾಪತ್ತೆ

ನೇಪಾಳದ ಪ್ರವಾಸೋದ್ಯಮ ಮಂಡಳಿಯು ನೀಡಿರುವ ಮಾಹಿತಿ ಪ್ರಕಾರ, ಪ್ರವಾಹ ಪೀಡಿತ ಪ್ರದೇಶದಿಂದ 291 ಮತ್ತು 93 ನೇಪಾಳಿ ಪ್ರಜೆಗಳು ಸೇರಿದಂತೆ ಕನಿಷ್ಠ 384 ಪ್ರಯಾನಿಕರು ನಾಪತ್ತೆಯಾಗಿದ್ದಾರೆ. ಅದರಲ್ಲಿ 105 ಮಂದಿ ಭಾರತೀಯರಾಗಿದ್ದು, ಇವರು ವಿವಿಧ ಟ್ರಾವೆಲ್‌ ಏಜೆನ್ಸಿಗಳ ಮೂಲಕ ಯಾತ್ರಗೆ ತರಳಿದ್ದರು ಎಂದು ತಿಳಿದು ಬಂದಿದೆ. ಇದರೊಂದಿಗೆ ರಸುವಾ ಜಿಲ್ಲೆಯಲ್ಲಿ 26 ನೇಪಾಳಿ ಪೊಲೀಸ್‌ ಸಿಬ್ಬಂದಿ ಮತ್ತು ಸಶಸ್ತ್ರ ಪೊಲೀಸ್‌ ಪಡೆಯ 7 ಸಿಬ್ಬಂದಿ ನಾಪತ್ತೆಯಾಗಿದ್ದಾರೆ.

ವಿದ್ಯುತ್ ಸಂಪರ್ಕ ಕಡಿತ

ಭೋಟೆ ಕೋಶಿ ನದಿಯ ಪ್ರವಾಹದಿಂದಾಗಿ ನೇಪಾಳದ ನಾಲ್ಕು ಪ್ರಮುಖ ಜಲವಿದ್ಯುತ್ ಯೋಜನೆಗಳಿಗೆ ತೀವ್ರ ಹಾನಿಯಾಗಿದೆ. ಸುಮಾರು 430 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಸಂಪೂರ್ಣ ಸ್ಥಗಿತಗೊಂಡಿದ್ದು, ದೇಶದ ಒಟ್ಟು ವಿದ್ಯುತ್ ಸರಬರಾಜಿನಲ್ಲಿ ಶೇ. 8 ರಷ್ಟು ಕೊರತೆ ಉಂಟಾಗಿದೆ. ಪೀಡಿತ ಜಿಲ್ಲೆಗಳಲ್ಲಿ ಸಂಪೂರ್ಣ ಕತ್ತಲೆ ಆವರಿಸಿದೆ.

ಇದನ್ನೂ ಓದಿ:

ಯುದ್ಧೋಪಾದಿಯಲ್ಲಿ ರಕ್ಷಣಾ ಕಾರ್ಯಾಚರಣೆ

ನೇಪಾಳದ ಪ್ರಧಾನಿ ಬಲೇಂದ್ರ ಶಾ ಅವರು ರಾಷ್ಟ್ರೀಯ ವಿಪತ್ತು ನಿರ್ವಹಣಾ ಮಂಡಳಿಯ ತುರ್ತು ಸಭೆ ಕರೆದಿದ್ದಾರೆ. ಪ್ರವಾಹ ಪೀಡಿತ ಪ್ರದೇಶಗಳಿಗೆ ನೇಪಾಳ ಸೇನೆ ಮತ್ತು ಸಶಸ್ತ್ರ ಪೊಲೀಸ್ ಪಡೆಗಳನ್ನು ರಕ್ಷಣಾ ಕಾರ್ಯಾಚರಣೆಗೆ ನಿಯೋಜಿಸಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !