ಹೊಸದಿಗಂತ ಡಿಜಿಟಲ್ ಡೆಸ್ಕ್:
ಬ್ರೇಕ್ ವೈಫಲ್ಯಗೊಂಡ ಪರಿಣಾಮ ನಿಯಂತ್ರಣ ತಪ್ಪಿದ ಬಸ್ ಮನೆಯ ಕಾಂಪೌಂಡ್‌ಗೆ ನುಗ್ಗಿ ಡಿಕ್ಕಿ ಹೊಡೆದ ಘಟನೆ ಬುಧವಾರ ಬೆಳಗ್ಗೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ದರ್ಬೆಯಲ್ಲಿ ನಡೆದಿದೆ.
ಮೂಲಗಳ ಮಾಹಿತಿ ಪ್ರಕಾರ ಪುತ್ತೂರಿನಿಂದ ಕುಂಬ್ರದತ್ತ ತೆರಳುತ್ತಿದ್ದ ಈ ಬಸ್ ದರ್ಬೆ ವೃತ್ತ ದಾಟಿ ಫಿಲೋಮಿನಾ ಕಾಲೇಜು ಸಮೀಪ ತಲುಪುತ್ತಿದ್ದ ವೇಳೆ ಬ್ರೇಕ್ ವೈಫಲ್ಯಗೊಂಡಿದೆ ಎನ್ನಲಾಗಿದೆ. ಪರಿಣಾಮ ಚಾಲಕನ ನಿಯಂತ್ರಣ ಕಳೆದುಕೊಂಡ ಬಸ್ ರಸ್ತೆ ಬದಿಯಿಂದ ಸುಮಾರು 50 ಅಡಿ ದೂರ ಸಾಗಿದ್ದು, ಬಳಿಕ ಮನೆಯ ಕಾಂಪೌಂಡ್‌ಗೆ ಡಿಕ್ಕಿ ಹೊಡೆದಿದೆ.
ಇದನ್ನೂ ಓದಿ:
ಅಪಘಾತದ ವೇಳೆ ಬಸ್‌ನಲ್ಲಿ ಹೆಚ್ಚಿನ ಸಂಖ್ಯೆಯ ಪ್ರಯಾಣಿಕರು ಇರಲಿಲ್ಲ ಹೀಗಾಗಿ ಅದೃಷ್ಟವಶಾತ್ ಯಾರಿಗೂ ಗಾಯವಾಗಿಲ್ಲ ಹಾಗೂ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಘಟನೆಯಿಂದ ಕೆಲಕಾಲ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಬಳಿಕ ಕ್ರೇನ್ ಸಹಾಯದಿಂದ ಬಸ್‌ನ್ನು ಸ್ಥಳದಿಂದ ತೆರವುಗೊಳಿಸಲಾಯಿತು. ಘಟನೆಗೆ ಬ್ರೇಕ್ ವೈಫಲ್ಯವೇ ಕಾರಣ ಎನ್ನಲಾಗುತ್ತಿದ್ದು, ಹೆಚ್ಚಿನ ವಿವರಗಳು ತನಿಖೆಯಿಂದ ತಿಳಿದುಬರಬೇಕಿದೆ.



