ಹೊಸದಿಗಂತ ವರದಿ ಹಾಸನ:
ಹೃದಯಾಘಾತಕ್ಕೆ 26 ವರ್ಷದ ಯುವಕನೊಬ್ಬ ಮೃತಪಟ್ಟಿರುವ ಘಟನೆ ಅರಕಲಗೂಡು ತಾಲೂಕಿನ ದೊಡ್ಡಮಗ್ಗೆ ಹೋಬಳಿಯ ಬೆಳವಾಡಿ ಗ್ರಾಮದಲ್ಲಿ ನಡೆದಿದೆ.
ಪುನೀತ್ (26) ಮೃತ ಯುವಕ. ಪುನೀತ್ ನಡೆದು ಹೋಗುವಾಗ ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡಿದ್ದು, ಕುಸಿದು ಬಿದ್ದಿದ್ದಾರೆ.ಯುವಕ ಇದ್ದಕ್ಕಿದ್ದಂತೆ ಕುಸಿದು ಬೀಳುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಆರೋಗ್ಯವಾಗಿದ್ದ ಪುನೀತ್ ನಡೆದುಕೊಂಡು ಹೋಗುತ್ತಿರುವ ವೇಳೆ ಇದ್ದಕ್ಕಿದ್ದಂತೆಯೇ ಎದೆನೋವಾಗಿದೆ. ಕೈಯನ್ನು ಎದೆಯ ಮೇಲೆ ಇಟ್ಟುಕೊಂಡು ಬಿದ್ದಿದ್ದಾರೆ.
ಯುವಕನ ಅಕಾಲಿಕ ಸಾವಿನಿಂದ ಕುಟುಂಬಸ್ಥರು ಹಾಗೂ ಗ್ರಾಮಸ್ಥರಲ್ಲಿ ಆಘಾತದ ವಾತಾವರಣ ನಿರ್ಮಾಣವಾಗಿದ್ದು, ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಇತ್ತೀಚೆಗೆ ಯುವಪೀಳಿಗೆಯಲ್ಲಿ ಹೃದಯಾಘಾತ ಹೆಚ್ಚಾಗುತ್ತಿದ್ದು, ಇಡೀ ರಾಜ್ಯವೇ ಆತಂಕದಲ್ಲಿದೆ.



