ಹೊಸದಿಗಂತ ವರದಿ ಹಾಸನ:
ಬ್ಯಾಂಕ್ ಸಾಲ ಸೇರಿದಂತೆ ಸಾಕಷ್ಟು ಕೈ ಸಾಲ ಮಾಡಿಕೊಂಡಿದ್ದ ಆಟೋ ಚಾಲಕರೊಬ್ಬರು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ನಗರದ ದೇವಮ್ಮ ಬಡಾವಣೆಯಲ್ಲಿ ನಡೆದಿದೆ.
ಮೃತರನ್ನು ಶಿವರಾಜ್ (40) ಎಂದು ಗುರುತಿಸಲಾಗಿದೆ. ಬ್ಯಾಂಕ್ ಸಾಲ ಹಾಗೂ ಕೈ ಸಾಲ ತೀರಿಸಲಾಗದೆ ಶಿವರಾಜ್ ತೀವ್ರ ಆರ್ಥಿಕ ಸಮಸ್ಯೆಗೆ ಸಿಲುಕಿದ್ದರು ಎನ್ನಲಾಗಿದೆ. ಸಾಲದ ವಿಚಾರವಾಗಿ ಕುಟುಂಬದಲ್ಲಿ ಪ್ರತಿನಿತ್ಯ ಜಗಳ ನಡೆಯುತ್ತಿತ್ತು. ಇದರಿಂದ ಮನನೊಂದ ಶಿವರಾಜ್ ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಶಂಕಿಸಲಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಎಫ್ಎಸ್ಎಲ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಈ ಘಟನೆ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.



