August 27, 2026
Thursday, August 27, 2026
spot_img

ನೇಪಾಳದ ಪ್ರವಾಹದಲ್ಲಿ ಸಿಲುಕಿರುವ ಕನ್ನಡಿಗನಿಗೆ ಧೈರ್ಯ ತುಂಬಿದ ಸಿಎಂ ಡಿ.ಕೆ.ಶಿವಕುಮಾರ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ನೇಪಾಳದಲ್ಲಿ ಸಂಭವಿಸಿರುವ ಭೀಕರ ಜಲಪ್ರಳಯದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರವು ಯುದ್ಧೋಪಾದಿಯಲ್ಲಿ ಕಾರ್ಯಪ್ರವೃತ್ತವಾಗಿದೆ. ಈ ದುರಂತದಲ್ಲಿ ಅದೃಷ್ಟವಶಾತ್ ಬದುಕುಳಿದಿರುವ ಕರ್ನಾಟಕದ ಮಲ್ಲಿನಾಥ್ ಅವರೊಂದಿಗೆ ಸಿಎಂ ಡಿ.ಕೆ.ಶಿವಕುಮಾರ್‌ ವಿಡಿಯೋ ಕಾಲ್ ಮೂಲಕ ಮಾತನಾಡಿ ಧೈರ್ಯ ತುಂಬಿದ್ದಾರೆ.

ನೇಪಾಳದಲ್ಲಿ ಸಂಭವಿಸಿದ ಹಠಾತ್ ಪ್ರವಾಹದಿಂದಾಗಿ ಹಲವರು ಪ್ರಾಣ ಕಳೆದುಕೊಂಡಿದ್ದು, ನೂರಾರು ಜನ ನಾಪತ್ತೆಯಾಗಿದ್ದಾರೆ. ಈ ಭೀಕರ ಪರಿಸ್ಥಿತಿಯ ನಡುವೆಯೂ ಪವಾಡಸದೃಶ ರೀತಿಯಲ್ಲಿ ಪಾರಾಗಿರುವ ಕನ್ನಡಿಗ ಮಲ್ಲಿನಾಥ್ ಅವರ ಆರೋಗ್ಯ ಮತ್ತು ಸುರಕ್ಷತೆಯನ್ನು ವಿಡಿಯೋ ಕರೆಯಲ್ಲಿ ವಿಚಾರಿಸಲಾಯಿತು.

ಇದನ್ನೂ ಓದಿ:

ಸಂಕಷ್ಟದ ಈ ಸಮಯದಲ್ಲಿ ಸಂತ್ರಸ್ತ ಕನ್ನಡಿಗರ ನೆರವಿಗೆ ಸರ್ಕಾರ ಸಂಪೂರ್ಣವಾಗಿ ಧಾವಿಸಲಿದೆ. ನೇಪಾಳದಲ್ಲಿ ಸಿಲುಕಿರುವ ಪ್ರತಿಯೊಬ್ಬ ಕನ್ನಡಿಗನನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಮರಳಿ ಕರೆತರಲು ಸಂಬಂಧಪಟ್ಟ ಕೇಂದ್ರ ಮತ್ತು ಸ್ಥಳೀಯ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದೆ. ರಕ್ಷಣಾ ಕಾರ್ಯಾಚರಣೆಯನ್ನು ಅತ್ಯಂತ ಸಕ್ರಿಯವಾಗಿ ಕೈಗೊಳ್ಳಲಾಗುತ್ತಿದ್ದು, ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಭರವಸೆ ನೀಡಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !