ಹೊಸದಿಗಂತ ವರದಿ ಬೆಳಗಾವಿ:
ಕನ್ನಡ ಸಂಘಟನೆಗಳನ್ನು ಅವಮಾನಿಸುವ, ಕನ್ನಡ ನಾಯಕರನ್ನು ಹೀಯಾಳಿಸುವ ಹಾಗೂ ಕನ್ನಡ ಸಂಘಟನೆಗಳ ಹೋರಾಟದ ಕುರಿತು ಸಾರ್ವಜನಿಕರಲ್ಲಿ ತಪ್ಪು ತಿಳುವಳಿಕೆ ಮೂಡಿಸುವ ಉದ್ದೇಶದಿಂದ AI ನಿರ್ಮಿತ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗುತ್ತಿದೆ ಎಂದು ಆರೋಪಿಸಿ ಕನ್ನಡಪರ ಸಂಘಟನೆಗಳ ಮುಖಂಡರು ಶಹಾಪುರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ.
ಕನ್ನಡ ಮತ್ತು ಮರಾಠಿ ಭಾಷಿಕರ ನಡುವೆ ದ್ವೇಷದ ಭಾವನೆ ಮೂಡಿಸುವ ರೀತಿಯಲ್ಲಿ ಕೆಲವು ಸಮಾಜವಿರೋಧಿ ಶಕ್ತಿಗಳು ಇಂತಹ ಚಿತ್ರಗಳು ಹಾಗೂ ಪೋಸ್ಟ್‌ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಿವೆ. ಈ ಕುರಿತು ಪೊಲೀಸ್ ಇಲಾಖೆ ಹಲವು ಬಾರಿ ಎಚ್ಚರಿಕೆ ನೀಡಿದ್ದರೂ, ಇಲ್ಲಸಲ್ಲದ ಮಾಹಿತಿಗಳನ್ನು ಆಧರಿಸಿ AI ಮೂಲಕ ಚಿತ್ರಗಳನ್ನು ಸೃಷ್ಟಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡಲಾಗುತ್ತಿದೆ ಎಂದು ಕನ್ನಡಪರ ಸಂಘಟನೆಗಳು ಆರೋಪಿಸಿವೆ.
ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಮಗ್ರವಾಗಿ ತನಿಖೆ ನಡೆಸಿ, AI ನಿರ್ಮಿತ ಚಿತ್ರಗಳನ್ನು ಸೃಷ್ಟಿಸಿ ಅಥವಾ ಪ್ರಸಾರ ಮಾಡಿ ಸಮಾಜದಲ್ಲಿ ಅಶಾಂತಿ ಹಾಗೂ ದ್ವೇಷಕ್ಕೆ ಕಾರಣವಾಗುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಇದನ್ನೂ ಓದಿ:
AI ತಂತ್ರಜ್ಞಾನದ ಬಳಿಸಿ ಮಹಾನಗರ ಪಾಲಿಕೆಯ ಸದಸ್ಯೆ ಸಾರಿಕಾ ಪಾಟೀಲ ಸೇರಿದಂತೆ ಇತರರ ಹೆಸರನ್ನೂ ಉಲ್ಲೇಖಿಸಲಾಗಿದೆ ಎಂದು ಕನ್ನಡಪರ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ್ ಚಂದರಗಿ ಶಹಾಪೂರ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸುವ ವೇಳೆ ಅಸಮಾಧಾನ ಹೋರಹಾಕಿದರು.
ಈ ವೇಳೆ ರಾಜೂ ಕೊಲಾ, ಬಲರಾಮ ಮಾಸೇನಟ, ಸಿದ್ದಲಿಂಗಪ್ಪ ಸುನಕುಪ್ಪಿ, ಶಿವಾಜಿ ಗಂ ಗೊರವ, ಲಕ್ಷ್ಮಿಕಾಂತ ಮಾನೆ ಸೇರಿದಂತೆ ಇತರರು ಇದ್ದರು.



