August 29, 2026
Saturday, August 29, 2026
spot_img

ದೈಹಿಕ ಆರೋಗ್ಯಕ್ಕೆ ಮಾತ್ರವಲ್ಲ, ಮಾನಸಿಕ ಕ್ಷಮತೆಗೂ ಕ್ರೀಡೆ ಅವಶ್ಯ: ಅರವಿಂದ ಬೆಲ್ಲದ

ಹೊಸದಿಗಂತ ವರದಿ ಧಾರವಾಡ:

ನಗರದ ಡಾ. ಆರ್.ಎನ್.ಶೆಟ್ಟಿ ಕ್ರೀಡಾಂಗಣದಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಬಾಸ್ಕೆಟ್‌ಬಾಲ್ ಟೂರ್ನಮೆಂಟ್‌ಗೆ ವಿಧಾನಸಭೆಯ ಪ್ರತಿಪಕ್ಷ ಉಪನಾಯಕ ಹಾಗೂ ಶಾಸಕ ಅರವಿಂದ ಬೆಲ್ಲದ ಶನಿವಾರ ಚಾಲನೆ ನೀಡಿದರು.

​ಕ್ರೀಡಾಕೂಟ ಉದ್ಘಾಟಿಸಿ ಅರವಿಂದ ಬೆಲ್ಲದ, ಕ್ರೀಡೆಗಳು ಕೇವಲ ದೈಹಿಕ ಆರೋಗ್ಯಕ್ಕೆ ಮಾತ್ರ ಸೀಮಿತವಾಗಿರದೆ, ಮಾನಸಿಕ ಶಕ್ತಿ ಮತ್ತು ಶಿಸ್ತನ್ನು ಬೆಳೆಸಲು ನೆರವಾಗುತ್ತವೆ. ಕ್ರೀಡಾಪಟುಗಳು ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಿ ಕ್ರೀಡಾಸ್ಫೂರ್ತಿಯಿಂದ ಮುನ್ನಡೆಯಬೇಕು ಎಂದರು.

ಇದನ್ನೂ ಓದಿ:

ಯುವಜನರು ಕ್ರೀಡೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ರಾಷ್ಟ್ರ ಮತ್ತು ರಾಜ್ಯ ಮಟ್ಟದಲ್ಲಿ ಸಾಧನೆ ಮಾಡಿ ಧಾರವಾಡ ಜಿಲ್ಲೆಗೆ ಕೀರ್ತಿ ತರಬೇಕು ಎಂದು ಕರೆ ನೀಡಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !