August 30, 2026
Sunday, August 30, 2026
spot_img

KPSC ನೇಮಕಾತಿ ಹಗರಣ: IAS ಅಧಿಕಾರಿ ಜ್ಞಾನೇಂದ್ರ ಕುಮಾರ್‌ ಸಿಐಡಿ ವಶಕ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕರ್ನಾಟಕ ಲೋಕಸೇವಾ ಆಯೋಗದಿಂದ ಪಶು ವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ಹಗರಣ ನಡೆದಿದೆ ಎನ್ನಲಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ಅವರನ್ನು ಸಿಐಡಿ ಅಧಿಕಾರಿಗಳು 11 ಗಂಟೆಗಳ ಕಾಲ ವಿಚಾರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ.

11 ಗಂಟೆಗಳ ಡ್ರಿಲ್

ಕೆಪಿಎಸ್‌ಸಿ ಪರೀಕ್ಷಾ ನಿಯಂತ್ರಕರಾಗಿದ್ದ ಅವಧಿಯಲ್ಲಿ ನೇಮಕಾತಿ ಅಕ್ರಮ, ಪ್ರಶ್ನೆಪತ್ರಿಕೆ ಸೋರಿಕೆ ಸೇರಿದಂತೆ ಹಲವು ವಿಚಾರಗಳ ಕುರಿತು ಸಿಐಡಿ ತನಿಖೆ ನಡೆಸುತ್ತಿದ್ದು, ಈ ಪ್ರಕರಣದ ಭಾಗವಾಗಿ ಜ್ಞಾನೇಂದ್ರ ಕುಮಾರ್ ಅವರನ್ನು 11 ಗಂಟೆಗಳ ವಿಚಾರಣೆ ನಡೆಸಿದ್ದಾರೆ.

ವಿಚಾರಣೆ ವೇಳೆ ಕೇಳಿದ ಪ್ರಶ್ನೆಗಳಿಗೆ ಸಮರ್ಪಕವಾಗಿ ಸ್ಪಂದಿಸದ ಹಿನ್ನಲೆಯಲ್ಲಿ ಜ್ಞಾನೇಂದ್ರ ಕುಮಾರ್ ಅವರನ್ನು ವಶಕ್ಕೆ ಪಡೆಯಾಗಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ:

ಕರ್ನಾಟಕ ಲೋಕಸೇವಾ ಆಯೋಗ (KPSC)ದಿಂದ ಪಶು ವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಹಗರಣದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ಅವರನ್ನು ವಶಕ್ಕೆ ಪಡೆದಿದ್ದಾರೆ.

ಮನೆಗಳ ಮೇಲೂ ಈಡಿ ದಾಳಿ

ಪ್ರಕರಣಕ್ಕೆ ಸಂಬಂಧಿಸಿದಂತೆ ಈಡಿ ಅಧಿಕಾರಿಗಳು ಕೆಪಿಎಸ್‌ಸಿ ಮಾಜಿ ಅಧ್ಯಕ್ಷರು, ಸದಸ್ಯರು ಹಾಗೂ ಸಂಬಂಧಿತ ಅಧಿಕಾರಿಗಳ ಮನೆಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದು, ಹಲವಾರು ಮಹತ್ವದ ದಾಖಲೆಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ. ಇದೀಗ ಸಿಐಡಿ ಅಧಿಕಾರಿಗಳು ಕೂಡ ತನಿಖೆಯನ್ನು ಚುರುಕುಗೊಳಿಸಿದ್ದು ಪ್ರಕರಣದ ಪ್ರಮುಖ ಬೆಳವಣಿಗೆಗಳು ಏನು ಅನ್ನೋದನ್ನು ಕಾದುನೋಡಬೇಕಿದೆ.

ಜ್ಞಾನೇಂದ್ರ ಕುಮಾರ್ ಅವರ ವೈದ್ಯಕೀಯ ತಪಾಸಣೆ ಬಳಿಕ ನ್ಯಾಯಾಲಯದ ಮುಂದೆ ಹಾಜರುಪಡಿಸಲು ಸಿಐಡಿ ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !