August 30, 2026
Sunday, August 30, 2026
spot_img

ಇನ್ಮುಂದೆ ‘ಸಿಂಗಲ್‌’ ಅಲ್ಲ ಚಿಕ್ಕಣ್ಣ: ಪಾವನಾ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಹಾಸ್ಯನಟ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕನ್ನಡ ಚಿತ್ರರಂಗದ ಹಾಸ್ಯ ನಟ ಚಿಕ್ಕಣ್ಣ ತಮ್ಮ ಸಿಂಗಲ್ ಜೀವನಕ್ಕೆ ಫುಲ್ ಸ್ಟಾಪ್ ಇಟ್ಟಿದ್ದಾರೆ.

ಹೌದು! ನಟ ಚಿಕ್ಕಣ್ಣ ಮಂಡ್ಯ ಮೂಲದ ಪಾವನಾ ಅವರ ಜೊತೆ ಇಂದು ಸಪ್ತಪದಿ ತುಳಿದಿದ್ದಾರೆ. ಕುಟುಂಬಸ್ಥರು, ಆಪ್ತರು ಹಾಗೂ ಚಿತ್ರರಂಗದ ಗಣ್ಯರ ಸಮ್ಮುಖದಲ್ಲಿ ಪಾವನಾ ಅವರ ಕೊರಳಿಗೆ ಮಾಂಗಲ್ಯಧಾರಣೆ ಮಾಡುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಆರತಕ್ಷತೆಯಲ್ಲಿ ಮಿಂಚಿದ ಚಿಕ್ಕಣ್ಣ-ಪಾವನಾ

ಮದುವೆಗೂ ಮುನ್ನ ನಿನ್ನೆ ನಡೆದ ಆರತಕ್ಷತೆ ಕಾರ್ಯಕ್ರಮದಲ್ಲಿ ಚಿಕ್ಕಣ್ಣ ಹಾಗೂ ಪಾವನಾ ಬ್ಲೂ ಅಂಡ್ ಬ್ಲೂ ಡ್ರೆಸ್ ನಲ್ಲಿ ಮಿಂಚಿದ್ದು ಅವರ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ಸಮಾರಂಭದಲ್ಲಿ ಡಾಲಿ ಧನಂಜಯ್, ತಾರಾ ಅನುರಾಧ, ಶ್ರೀಮುರಳಿ, ರಂಗಾಯಣ ರಘು, ಮೇಘನಾ ಗಾಂವ್ಕರ್ ಸೇರಿದಂತೆ ಚಿತ್ರರಂಗದ ಹಲವು ಗಣ್ಯರು ಭಾಗಿಯಾಗಿ ನವಜೋಡಿಗೆ ಶುಭ ಹಾರೈಸಿದರು.

ಹೊಸ ಜೀವನ ಆರಂಭಿಸಿದ ನವದಂಪತಿಗೆ ಸಿನಿರಂಗ ಹಾಗೂ ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದುಬಂದಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !