ಹೊಸದಿಗಂತ ಡಿಜಿಟಲ್ ಡೆಸ್ಕ್:
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆಯುತ್ತಿರುವ ಅಹಿತಕರ ಘಟನೆಗಳಿಗೆ ಪ್ರತಿಭಟನಾ ಸೂಚಕವಾಗಿ ಹಿಂದು ಸಂಘಟನೆಗಳು ನಾಳೆ (ಆ.೩೧) ಹಮ್ಮಿಕೊಂಡಿರುವ ‘ಪುತ್ತೂರು ಚಲೋ’ ಕಾರ್ಯಕ್ರಮಕ್ಕೆ ಪೊಲೀಸ್ ಇಲಾಖೆ ಷರತ್ತುಬದ್ಧ ಅನುಮತಿ ನೀಡಿದೆ.

ಈ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಪುತ್ತೂರು ನಗರ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ಪಥಸಂಚಲನ ನಡೆಸಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ವ್ಯಾಪಕ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ.

‘ಪುತ್ತೂರು ಚಲೋ’ ಹಿನ್ನೆಲೆಯಲ್ಲಿ ಒಟ್ಟು 167 ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ. ಇದರಲ್ಲಿ ಒಬ್ಬರು ಹೆಚ್ಚುವರಿ ಪೊಲೀಸ್ ಅಧೀಕ್ಷಕ, ಒಬ್ಬರು ಡಿವೈಎಸ್‌ಪಿ, ಮೂವರು ಪೊಲೀಸ್ ಇನ್ಸ್‌ಪೆಕ್ಟರ್‌ಗಳು, 10 ಪಿಎಸ್‌ಐ, 14 ಎಎಸ್‌ಐ ಹಾಗೂ 139 ಪೊಲೀಸ್ ಸಿಬ್ಬಂದಿ ಸೇರಿದ್ದಾರೆ.
ಇದರೊಂದಿಗೆ 5 ಕೆಎಸ್‌ಆರ್‌ಪಿ ತುಕಡಿ, 2 ಎಸ್‌ಎಎಫ್ ತಂಡ ಹಾಗೂ 7 ಡಿಎಆರ್ ತುಕಡಿಗಳನ್ನು ಕೂಡಾ ಬಂದೋಬಸ್ತ್‌ಗಾಗಿ ಪುತ್ತೂರಿನಲ್ಲಿ ನಿಯೋಜಿಸಲಾಗಿದೆ. ಕಾರ್ಯಕ್ರಮವು ಶಾಂತಿಯುತವಾಗಿ ನಡೆಯುವಂತೆ ಪೊಲೀಸ್ ಇಲಾಖೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದು, ಕಾನೂನು ಸುವ್ಯವಸ್ಥೆ ಕಾಪಾಡಲು ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ ಮಾಡಲಾಗಿದೆ.



