ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಸಾಲಬಾಧೆ ತಾಳಲಾರದೇ ಇಬ್ಬರು ಮಕ್ಕಳು, ಪತಿಯನ್ನು ಕೊಂದು ಪತ್ನಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಗೊಣಕನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗೊಣಕನಹಳ್ಳಿ ಗ್ರಾಮದಲ್ಲಿ ಶಿವು (32), ಮಕ್ಕಳಾದ ಚಂದ್ರಕಲಾ (11), ಉದಯ್ ಸೂರ್ಯ (7) ಸಾವನ್ನಪ್ಪಿದ್ದು, ಇಬ್ಬರು ಮಕ್ಕಳು, ಪತಿಯನ್ನು ಕೊಂದ ಬಳಿಕ ಪತ್ನಿಯೂ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಅದೃಷ್ಟವಶಾತ್ ಮಂಜುಳಾ ಪ್ರಾಣಾಪಾಯದಿಂದ ಪಾರಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು,ಪರಿಶೀಲನೆ ನಡೆಸಿದ್ದಾರೆ.
ಈ ಹಿಂದೆ ಪತಿ ಅಪಘಾತದಲ್ಲಿ ಗಾಯಗೊಂಡಿದ್ದ ಕಾರಣ ಚಿಕಿತ್ಸೆಗಾಗಿ ಕುಟುಂಬ ಸಾಲ ಮಾಡಿಕೊಂಡಿತ್ತು. ಸಾಲ ಹೆಚ್ಚಾಗಿದ್ದರಿಂದ ದಂಪತಿ ಆತ್ಮಹತ್ಯೆಗೆ ನಿರ್ಧಾರ ಮಾಡಿದ್ದಾರೆ.
ಪತಿ, ಮಕ್ಕಳಿಗೆ ವೇಲ್ ನಿಂದ ಬಿಗಿದು ಕೊಲೆ ಮಾಡಿದ್ದ ಮಂಜುಳಾ ನಂತರ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಹಗ್ಗ ತುಂಡಾದ ಕಾರಣ ಪ್ರಾಣಾಪಾಯದಿಂದ ಪಾರಾಗಿದ್ದಾರೆ.