ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಹಾಸನ ಗಣೇಶ ಮೆರವಣಿಗೆ ವೇಳೆ ಕ್ಯಾಂಟರ್ ಹರಿದು 10 ಜನ ಸಾವುನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಯಾಂಟರ್ ಚಾಲಕ ಭುವನೇಶ್ ನನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದ್ದು, ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ನಾಗಮಂಗಲದ ಬೆಳ್ಳೂರು ಆಸ್ಪತ್ರೆಗೆ ಭುವನೇಶ್ ನನ್ನು ದಾಖಲಿಸಲಾಗಿತ್ತು.
ಚಾಲಕ ಮದ್ಯಪಾನ ಮಾಡಿದ್ದಾನೆ ಎಂದು ಪರೀಕ್ಷಿಸಲು ರಕ್ತದ ಮಾದರಿ ಸಂಗ್ರಹಿಸಿದ್ದು, ಇಂದು ಚಾಲಕ ಭುವನೇಶ್ ಬ್ಲಡ್ ರಿಪೋರ್ಟ್ ಬರುವ ಸಾಧ್ಯತೆ ಇದೆ.
ಕ್ಯಾಂಟರ್ ಚಾಲಕ ಭುವನೇಶ್ ನಿರ್ಲಕ್ಷ್ಯವೇ ದುರಂತಕ್ಕೆ ಕಾರಣವಾಗಿದ್ದು, ಆತನ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.