ಹೊಸದಿಗಂತ ಡಿಜಿಟಲ್ ಡೆಸ್ಕ್:
ಡಿವೈಡರ್ಗೆ ಕಾರು ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಮೂವರು ಪ್ರಯಾಣಿಕರು ಮೃತಪಟ್ಟಿರುವ ಘಟನೆ ಧಾರವಾಡ ತಾಲೂಕಿನ ವೆಂಕಟಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಅಪಘಾತದಲ್ಲಿ ಮೂವರು ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ವೆಂಕಟಾಪುರ ಗ್ರಾಮದ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಸಂಭವಿಸಿದ್ದು, ದಾವಣಗೆರೆ ಮೂಲದ ವಿನಾಯಕ್ (25), ಮಂಜುನಾಥ್ (29) ಹಾಗೂ ಬಸವರಾಜ (34) ಎಂಬುವವರು ಈ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಅಭಿಷೇಕ, ಅಜಯ್ ಹಾಗೂ ಬಸನಗೌಡ ಎಂಬ ಮೂವರು ತೀವ್ರವಾಗಿ ಗಾಯಗೊಂಡಿದ್ದಾರೆ.
ಡಿವೈಡರ್ಗೆ ಗುದ್ದಿ ಕಾರ್ ಪಲ್ಟಿ
ಬೆಳಗಾವಿ ಕಡೆಯಿಂದ ಧಾರವಾಡಕ್ಕೆ ಬರುತ್ತಿರುವ ವೇಳೆ ಮುಂದಿದ್ದ ವಾಹನ ಡಿಕ್ಕಿ ತಪ್ಪಿಸಲು ಹೋಗಿ ಡಿವೈಡರ್ಗೆ ಗುದ್ದಿ ಕಾರ್ ಪಲ್ಟಿ ಹೊಡೆದಿದೆ. ಇದರ ಪರಿಣಾಮವಾಗಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತದೇಹಗಳನ್ನು ಜಿಲ್ಲಾಸ್ಪತ್ರೆಯಲ್ಲಿ ಇಡಲಾಗಿದೆ.ಸ್ಥಳಕ್ಕೆ ಗರಗ ಠಾಣೆ ಪಿಎಸ್ಐ ಪ್ರವೀಣ ಗಂಗೋಳ ಸೇರಿದಂತೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



