ಹೊಸದಿಗಂತ ಡಿಜಿಟಲ್ ಡೆಸ್ಕ್:
ನೇಪಾಳವನ್ನು ಕಂಗೆಡಿಸಿರುವ ಭೀಕರ ಪ್ರವಾಹದ ಬೆನ್ನಲ್ಲೇ ನಡೆಯುತ್ತಿರುವ ರಕ್ಷಣಾ ಕಾರ್ಯಾಚರಣೆಯಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ಬೆಳಕಿಗೆ ಬಂದಿದೆ.
ರಕ್ಷಣಾ ಕಾರ್ಯಾಚರಣೆಯ ವೇಳೆ ಸೋಮವಾರ ಆರು ಮೃತದೇಹಗಳನ್ನು ಹೊರತೆಗೆಯಲಾಗಿತ್ತು. ಮಂಗಳವಾರ ಉಳಿದ ಮೃತದೇಹಗಳನ್ನು ಹೊರತೆಗೆಯಲಾಗಿದೆ.
ಇದನ್ನೂ ಓದಿ:
ನುವಾಕೋಟ್ನ ಬೆಟ್ರಾವತಿ ಪ್ರದೇಶದಲ್ಲಿ ಒಂದೇ ಮನೆಯೊಳಗೇ 23 ಮೃತದೇಹಗಳು ಪತ್ತೆಯಾಗಿವೆ ಎಂದು ನುವಾಕೋಟ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಪಿನ್ ರೆಗ್ಮಿ ಹೇಳಿದ್ದಾರೆ. ಈ ಪೈಕಿ ಹಲವು ಮೃತದೇಹಗಳನ್ನು ಗುರುತಿಸಲು ಸಾಧ್ಯವಾಗದಷ್ಟು ಕೊಳೆತ ಸ್ಥಿತಿಯಲ್ಲಿವೆ ಎನ್ನಲಾಗಿದೆ. ಕುಟುಂಬಸ್ಥರು ತಮ್ಮವರಿಗಾಗಿ ಆತಂಕದಿಂದ ಕಾಯುತ್ತಿದ್ದು, ಗುರುತಿನ ಪ್ರಕ್ರಿಯೆ ಬಳಿಕ ಹೆಚ್ಚಿನ ಮಾಹಿತಿ ಲಭ್ಯವಾಗುವ ನಿರೀಕ್ಷೆಯಿದೆ.
ಪ್ರವಾಹ ದುರಂತ ಸಂಭವಿಸಿ ಆರು ದಿನಗಳಾದರೂ ಹಲವು ಪ್ರದೇಶಗಳಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಕೆಸರು, ಮಣ್ಣು ಹಾಗೂ ಕುಸಿದ ಕಟ್ಟಡಗಳ ಅವಶೇಷಗಳ ನಡುವೆ ರಕ್ಷಣಾ ಸಿಬ್ಬಂದಿ ನಾಪತ್ತೆಯಾದವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.



