September 1, 2026
Tuesday, September 1, 2026
spot_img

ಕಾಂಗ್ರೆಸ್‌ನಲ್ಲಿ ದೇಣಿಗೆ ಕೊಟ್ಟವರೇ ಸಿಎಂ, ಸಚಿವರಾಗಿದ್ದಾರೆ: ಜಗದೀಶ್ ಶೆಟ್ಟರ್ ವಾಗ್ದಾಳಿ

ಹೊಸದಿಗಂತ ವರದಿ ರಾಯಚೂರು:

ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಡಿಕೆಶಿ ಗುಂಪು, ಸಿದ್ದರಾಮಯ್ಯರ ಗುಂಪು, ಇನ್ನೊಂದು ಹೈಕಮಾಂಡ್ ಗುಂಪುಗಳಿವೆ. ದೇಣಿಗೆ ಕೊಟ್ಟವರೇ ಸಿಎಂ, ಸಚಿವರಾಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದರು.

ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ನೇತೃತ್ವದ ಬಳ್ಳಾರಿ ಚಲೋ ಪಾದಯಾತ್ರೆಯ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ರಾಜ್ಯದ ಡಿ.ಕೆ.ಶಿವಕುಮಾರ್ ಸರ್ಕಾರಕ್ಕೆ ಎಚ್ಚರಿಕೆ ನೀಡುವುದಕ್ಕಾಗಿ ಬಿಜೆಪಿ ಈ ಪಾದಯಾತ್ರೆಯನ್ನು ನಡೆಸುತ್ತಿದೆ. ಬಿಜೆಪಿ ತೀವ್ರ ಹೋರಾಟದ ಪರಿಣಾಮವಾಗಿ ನಾಗೇಂದ್ರ ರಾಜೀನಾಮೆ ಕೊಟ್ಟಿದ್ದು, ಹೋರಾಟ ಮಾಡಿದ ನಾಯಕರೆಲ್ಲರಿಗೂ ಅಭಿನಂದನೆಗಳು ಸಲ್ಲಿಸಿದರು.

ದುರಾಡಳಿತದ ವಿರುದ್ಧ ಹೋರಾಟ ನಮ್ಮದು

ಈ ಕಾರ್ಯಕ್ರಮದಲ್ಲಿ ಮಾತನಾಡಿದ ಸಂಸದ ಗೋವಿಂದ ಕಾರಜೋಳ ಅವರು, ಕಾಂಗ್ರೆಸ್ ಸರಕಾರವು ಮಾಡಿರುವ ದುರಾಡಳಿತದ ವಿರುದ್ಧ ಹೋರಾಟ ನಮ್ಮದು ಎಂದಿದ್ದಾರೆ.

 53 ಸಾವಿರ ಕೋಟಿಗೂ ಹೆಚ್ಚು ಮೊತ್ತದ ದಲಿತರ ಹಣವನ್ನು ಅನ್ಯ ಉದ್ದೇಶಕ್ಕೆ ದುರುಪಯೋಗ ಮಾಡಿಕೊಂಡಿದ್ದಾರೆ. ವಾಲ್ಮೀಕಿ ನಿಗಮದ ಹಣ ವಾಪಸ್ ಖಜಾನೆಗೆ ಬರಬೇಕಿದೆ. ಮೀಸಲಾತಿ ಪ್ರಮಾಣ ಹೆಚ್ಚಿಸಬೇಕಿದೆ ಎಂದು ಹೇಳಿದರು.

ಜನರಿಗಾಗಿ ಜನಪರವಾದ ಪಾದಯಾತ್ರೆ ಇದು

ಇನ್ನು, ಈ ಸಂದರ್ಭದಲ್ಲಿ ಮಾತನಾಡಿದ, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು, ಜನರಿಗಾಗಿ ಜನಪರವಾದ 10 ದಿನಗಳ ಪಾದಯಾತ್ರೆ ಇದು. ರಾಜ್ಯದಲ್ಲಿ ಭ್ರಷ್ಟ ಸರಕಾರದ ವಿಚಾರಗಳನ್ನು ಜನಮನಕ್ಕೆ ಮುಟ್ಟಿಸಲು ಬಿಜೆಪಿ ಈ ಪಾದಯಾತ್ರೆ ಹಮ್ಮಿಕೊಂಡಿದೆ. ಕಾಂಗ್ರೆಸ್ ಸರಕಾರ ಮಹಿಳಾ ವಿರೋಧಿ, ದಲಿತ ವಿರೋಧಿ, ಯುವಜನರ ವಿರೋಧಿ, ರೈತವಿರೋಧಿ ಎಂದು ವಾಗ್ದಾಳಿ ನಡೆಸಿದರು.

ಇದನ್ನೂ ಓದಿ:

ಜನರನ್ನು ಬೀದಿಯಲ್ಲಿ ನಿಲ್ಲಿಸುವ ಕೆಲಸವನ್ನು ಈ ಸರಕಾರ ಮಾಡಿದೆ

ಈ ವೇಳೆ ಮಾತನಾಡಿದ ಮಾಜಿ ಸಚಿವ ಬಿ.ಶ್ರೀರಾಮುಲು, ಕಾಂಗ್ರೆಸ್‌ ಸರ್ಕಾರ ಜನರನ್ನು ಬೀದಿಯಲ್ಲಿ ನಿಲ್ಲಿಸುವ ಕೆಲಸವನ್ನು ಮಾಡಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಭ್ರಷ್ಟಾಚಾರ ಮಿತಿಮೀರಿದೆ. ಕಾನೂನು- ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಬರಗಾಲ ತೀವ್ರವಾಗಿ ರೈತರು ಗುಳೆ ಹೋಗುತ್ತಿದ್ದು, ಸರಕಾರ ಸ್ಪಂದಿಸುತ್ತಿಲ್ಲ.ರಾಜ್ಯ ಸರ್ಕಾರ ಅಭಿವೃದ್ಧಿ ಹಾಗೂ ಉತ್ತರ ಕರ್ನಾಟಕ ವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದೆ. ಬರೀ ಹಗರಣದಲ್ಲಿ ಮುಳುಗಿದೆ ಎಂದು ಗುಡುಗಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !