ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬಕ್ಕೆ ಸಂಕಷ್ಟ ತಂದೊಡ್ಡಿದ ಮುಡಾ ಹಗರಣ ಈಗ ಮತ್ತೊಮ್ಮೆ ಚರ್ಚೆಯ ಕೇಂದ್ರಬಿಂದುವಾಗಿದೆ.
ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ‘ಬಿ’ ರಿಪೋರ್ಟ್ ಪ್ರಶ್ನಿಸಿ ಜಾರಿ ನಿರ್ದೇಶನಾಲಯ (ಇಡಿ) ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.
ಇಡಿ ಪರ ಎಎಸ್‌ಜಿ ಅರವಿಂದ್ ಕಾಮತ್ ವಾದ ಮಂಡಿಸಿ, ಲೋಕಾಯುಕ್ತ ತನಿಖೆಯಲ್ಲಿ ಹಲವು ಪ್ರಮುಖ ಅಂಶಗಳನ್ನು ಪರಿಗಣಿಸಲಾಗಿಲ್ಲ ಎಂದು ದೂರಿದರು. ಜತೆಗೆ ಕಾನೂನುಬಾಹಿರ ಡಿನೋಟಿಫಿಕೇಷನ್ ಹಾಗೂ ಭೂ ಪರಿವರ್ತನೆಗೆ ಸಂಬಂಧಿಸಿದ ಅಂಶಗಳ ಬಗ್ಗೆ ಸಮರ್ಪಕ ತನಿಖೆ ನಡೆದಿಲ್ಲ ಎಂದರು.
ಇದನ್ನೂ ಓದಿ:
ವಿಚಾರಣೆ ನಾಳೆ ಮುಂದೂಡಿದ ಹೈಕೋರ್ಟ್
ವಾದ ಆಲಿಸಿದ ಹೈಕೋರ್ಟ್ ಏಕಸದಸ್ಯ ಪೀಠ ವಿಚಾರಣೆಯನ್ನು ನಾಳೆ ಮಧ್ಯಾಹ್ನ 2.30ಕ್ಕೆ ಮುಂದೂಡಿದೆ. ಈಗಾಗಲೇ ಮುಡಾ ಪ್ರಕರಣದ ‘ಬಿ’ ರಿಪೋರ್ಟ್ ಅನ್ನು ಪ್ರಶ್ನಿಸಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯ ಕೃಷ್ಣ ಕೂಡ ನ್ಯಾಯಾಲಯದ ಮೊರೆ ಹೋಗಿದ್ದು, ಇದೀಗ ಇಡಿಯ ಅರ್ಜಿಯಿಂದ ಪ್ರಕರಣ ಮತ್ತಷ್ಟು ಕುತೂಹಲ ಮೂಡಿಸಿದೆ.



