ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಕರಾವಳಿ ಹಾಗೂ ಮಲೆನಾಡಿನ ಹಲವು ಭಾಗಗಳಲ್ಲಿ ಮಳೆಯ ವಾತಾವರಣ ಮುಂದುವರಿಯುತ್ತದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಣ್ಣ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಇಂದು ಕರಾವಳಿಲ್ಲಿ ಮಾತ್ರ ಗುಡುಗು ಮಿಂಚು ಹಾಗೂ ಬಲವಾದ ಗಾಳಿ ಬೀಸಲಿದೆ. ಆದರೆ ಸಾಧಾರಣ ಮಳೆ ಆಗಬಹುದಷ್ಟೆ ಎನ್ನಲಾಗಿದೆ. ಇನ್ನು ಮಲೆನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಸಣ್ಣ ಪ್ರಮಾಣದ ಮಳೆ ಬೀಳಬಹುದು.
ಬೆಳಗಾವಿ, ಧಾರವಾಡ, ಹಾವೇರಿ ಸೇರಿದಂತೆ ಕೆಲವೆಡೆ ಮೋಡ ಕವಿದ ವಾತಾವರಣದ ಜೊತೆಗೆ ತುಂತುರು ಮಳೆಯಾಗಬಹುದು. ಇನ್ನು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು ಸೇರಿದಂತೆ ದಕ್ಷಿಣ ಒಳನಾಡಿನ ಕೆಲವೆಡೆ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಒಟ್ಟಾರೆ ರಾಜ್ಯದಲ್ಲಿ ಮಳೆ ಚಟುವಟಿಕೆ ಸಾಮಾನ್ಯಕ್ಕಿಂತ ಕಡಿಮೆಯಾಗುವ ಸಾಧ್ಯತೆಯಿದೆ.



