ಹೊಸದಿಗಂತ ಡಿಜಿಟಲ್ ಡೆಸ್ಕ್:
ಇತ್ತೀಚಿಗೆ ನಲ್ಸಾರ್ (NALSAR) ಕಾನೂನು ವಿಶ್ವವಿದ್ಯಾಲಯದ ಕುರಿತು ಭಾರತೀಯ ಬಾರ್ ಕೌನ್ಸಿಲ್ ಹೊರಡಿಸಿರುವ ಶಿಸ್ತು ಕ್ರಮದ ವಿರುದ್ಧ ಈಗ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಕಾನೂನು ವಿದ್ಯಾರ್ಥಿಗಳ ನಡವಳಿಕೆಯನ್ನು ನಿಯಂತ್ರಿಸುವ ಹಾಗೂ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವ ಶಾಸನಬದ್ಧ ಅಧಿಕಾರ ಭಾರತೀಯ ಬಾರ್ ಕೌನ್ಸಿಲ್ (BCI) ಮತ್ತು ರಾಜ್ಯ ಬಾರ್ ಕೌನ್ಸಿಲ್‌ಗಳಿಗೆ ಇಲ್ಲ ಎಂದು ಸ್ಪಷ್ಟಪಡಿಸಿದೆ.
ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿಗಳಾದ ಜೋಯ್ಮಲ್ಯ ಬಾಗ್ಚಿ ಮತ್ತು ವಿ. ಮೋಹನ್ ಅವರನ್ನೊಳಗೊಂಡ ತ್ರಿಸದಸ್ಯ ಪೀಠವು ಈ ವಿಚಾರವನ್ನು ವಿಚಾರಣೆ ನಡೆಸಿತು.
ನಿಮಗೆ ಅಧಿಕಾರ ಇಲ್ಲ
ಕಾನೂನು ವಿದ್ಯಾರ್ಥಿಗಳು ವಕೀಲರಾಗಿ ನೋಂದಾಯಿಸಿಕೊಳ್ಳುವ ಮುನ್ನವೇ ಅವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುವ ಶಾಸನಬದ್ಧ ಅಧಿಕಾರ ಭಾರತೀಯ ಬಾರ್ ಕೌನ್ಸಿಲ್ (BCI) ಮತ್ತು ರಾಜ್ಯ ಬಾರ್ ಕೌನ್ಸಿಲ್‌ಗಳಿಗೆ ಇಲ್ಲ ಎಂದು ಸ್ಪಷ್ಟಪಡಿಸಿದೆ.
ಇದನ್ನೂ ಓದಿ:
BCIಗೆ ಕಾನೂನು ಶಿಕ್ಷಣದ ಗುಣಮಟ್ಟ ಮತ್ತು ಮಾನದಂಡಗಳನ್ನು ನಿಗದಿಪಡಿಸುವ ಹಾಗೂ ಅನ್ವಯವಾಗುವ ಕಾನೂನು ಮತ್ತು ನಿಯಮಗಳ ಪ್ರಕಾರ ಅವುಗಳನ್ನು ಜಾರಿಗೊಳಿಸುವ ಅಧಿಕಾರವಿದೆ ಹೊರತು ಕಾನೂನು ವಿದ್ಯಾರ್ಥಿಯ ವಿರುದ್ಧ ನೇರವಾಗಿ ಶಿಸ್ತು ಕ್ರಮ ಕೈಗೊಳ್ಳುವ ಅಧಿಕಾರ ಇಲ್ಲ ಎಂದು ಹೇಳಿದೆ.
ಏನಿದು NALSAR ವಿವಾದ?
ಹೈದರಾಬಾದ್ನ ನಲ್ಸಾರ್ ವಿಶ್ವವಿದ್ಯಾಲಯದ ಪದವಿಪ್ರದಾನ ಸಮಾರಂಭಕ್ಕೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರನ್ನು ಆಹ್ವಾನಿಸಿದ್ದನು ವಿದ್ಯಾರ್ಥಿಗಳು ವಿರೋಧಿಸಿದ್ದರು. ಈ ವರ್ತನೆಯನ್ನು ಗಂಭೀರವಾಗಿ ಪರಿಗಣಿಸಿದ ಬಾರ್ ಕೌನ್ಸಿಲ್ ಆಫ್ ಇಂಡಿಯಾ, ಆಗಸ್ಟ್ 13ರಂದು ಆದೇಶ ಹೊರಡಿಸಿ 2026ರ ಬ್ಯಾಚ್‌ನ ನಲ್ಸಾರ್ ವಿದ್ಯಾರ್ಥಿಗಳನ್ನು ಯಾವುದೇ ರಾಜ್ಯ ಬಾರ್ ಕೌನ್ಸಿಲ್‌ಗಳಲ್ಲಿ ವಕೀಲರಾಗಿ ನೋಂದಾಯಿಸಬಾರದು ಎಂದು ನಿರ್ದೇಶಿಸಿತ್ತು.



