ಹೊಸದಿಗಂತ ಡಿಜಿಟಲ್ ಡೆಸ್ಕ್:
ಶ್ರೀನಗರ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆದ ನಂತರ ಇಂಡಿಗೋ ವಿಮಾನವೊಂದು ಕಂಬಕ್ಕೆ ಡಿಕ್ಕಿ ಹೊಡೆದಿದ್ದು, ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿದೆ.
ಇಂದು ಬೆಳಗ್ಗೆ ನವಿ ಮುಂಬೈನಿಂದ ಶ್ರೀನಗರಕ್ಕೆ ಬರುತ್ತಿದ್ದ ಇಂಡಿಗೋ 6E 225 ವಿಮಾನ ಲ್ಯಾಂಡಿಂಗ್ ವೇಳೆ ನಿಯೋಜಿತ ಸ್ಥಳಕ್ಕೆ ಪಾರ್ಕಿಂಗ್ ಮಾಡುವಾಗ ವಿಶ್ಯುಯಲ್ ಡಾಕಿಂಗ್ ಗೈಡೆನ್ಸ್ ಸಿಸ್ಟಮ್ಸ್ ಕಂಬಕ್ಕೆ ಗುದ್ದಿಗೆ. ಸದ್ದು ಹಾಗೂ ವಿಮಾನ ಅಲುಗಾಡಿದ ವೇಗಕ್ಕೆ ಜನ ಹೆದರಿದ್ದಾರೆ.
ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿ ಸುರಕ್ಷಿತವಾಗಿದ್ದಾರೆ. ಯಾರಿಗೂ ಯಾವುದೇ ಗಾಯಗಳಾಗಿಲ್ಲ ಎಂದು ನಿಲ್ದಾಣದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಬೇ ನಂಬರ್ ಆರಕ್ಕೆ ವಿಮಾನವನ್ನು ನಿಲ್ಲಿಸುವಂತೆ ಸೂಚನೆ ನೀಡಲಾಗಿತ್ತು. ಈ ವೇಳೆ ಆಕಸ್ಮಿಕವಾಗಿ ವಿಶ್ಯಯಲ್ ಡಾಕಿಂಗ್ ಗೈಡೆನ್ಸ್ ಸಿಸ್ಟಮ್ಸ್ ಕಂಬಕ್ಕೆ ಡಿಕ್ಕಿಯಾಗಿದೆ. ವಿಮಾನದಿಂದ ಎಲ್ಲ ಪ್ರಯಾಣಿಕರು ಹಾಗೂ ಸಿಬ್ಬಂದಿಯನ್ನು ಇಳಿಸಲು ಹಸ್ತಚಾಲಿತ ವಿಮಾನ ಮೆಟ್ಟಿಲುಗಳನ್ನು ತರಲಾಯಿತು. ಯಾರಿಗೂ ಯಾವುದೇ ರೀತಿಯ ಆರೋಗ್ಯ ಸಮಸ್ಯೆ ಆಗಿಲ್ಲ ಎಂದು ಅಧಿಕಾರಿಗಳು ಸ್ಪಷ್ಟನೆ ನೀಡಿದ್ದು, ವಿಮಾನಕ್ಕೂ ಹಾನಿಯಾಗಿಲ್ಲ ಎಂದು ಹೇಳಲಾಗಿದೆ.



