September 4, 2026
Friday, September 4, 2026
spot_img

ಮಳೆ ಕೊರತೆ ನೀಗಿಸಲು ಇಂದಿನಿಂದ ಮೋಡ ಬಿತ್ತನೆ: ಚಾಲನೆ ಕೊಟ್ಟ ರಾಜ್ಯ ಸರ್ಕಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯದಲ್ಲಿ ಮೂಡಿರುವ ಬರ ಪರಿಸ್ಥಿತಿಯನ್ನು ಅವಲೋಕಿಸಿದ ನಂತರ ರಾಜ್ಯ ಸರ್ಕಾರ ಮೋಡ ಬಿತ್ತನೆ ಮಾಡಲು ನಿರ್ಧರಿಸಿದೆ. ಅಂತೆಯೇ ಇಂದು ಮೋಡ ಬಿತ್ತನೆ ಕಾರ್ಯಕ್ಕೆ ಬೆಂಗಳೂರಿನ ಹೆಚ್‌ಎಎಲ್‌ ವಿಮಾನ ನಿಲ್ದಾಣದಲ್ಲಿ ಸಚಿವ. ಎನ್‌. ಚಲುವರಾಯಸ್ವಾಮಿ ಚಾಲನೆ ನೀಡಿದ್ದಾರೆ.

ಮೋಡ ಬಿತ್ತನೆ ಕಾರ್ಯವನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಮೇಲ್ವಿಚಾರಣಾ ಸಮಿತಿ, ತಾಂತ್ರಿಕ ಸಮಿತಿ, ಕ್ಷೇತ್ರ ಕಾರ್ಯಾಚರಣೆ ಹಾಗೂ ಮೌಲ್ಯಮಾಪನ ಸಮಿತಿಗಳನ್ನು ರಚಿಸಲಾಗಿದೆ.ತಾಂತ್ರಿಕ ಸಮಿತಿಯಲ್ಲಿ ಐಐಟಿ, ಐಐಎಸ್‌ಸಿ ಹಾಗೂ ಹವಾಮಾನ ಇಲಾಖೆಯ ತಜ್ಞರು ಇದ್ದರು. ರಾಜ್ಯದ ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡಗಳ ಲಭ್ಯತೆಯ ಆಧಾರದ ಮೇಲೆ ಮೋಡ ಬಿತ್ತನೆ ಕಾರ್ಯ ನಡೆಯಿತು. ಮೋಡ ಬಿತ್ತನೆ ನಡೆಯುವ ಪ್ರದೇಶದ 15 ಕಿಲೋಮೀಟರ್ ವ್ಯಾಪ್ತಿಯಲ್ಲಿ ಮಳೆಯಾಗುವ ನಿರೀಕ್ಷೆ ಇದೆ.

27 ಕೋಟಿ ರೂಪಾಯಿ ವೆಚ್ಚದ ಕಾರ್ಯಾಚರಣೆ

ಒಟ್ಟು 27 ಕೋಟಿ ರೂಪಾಯಿ ವೆಚ್ಚದ ಈ ಕಾರ್ಯಾಚರಣೆ 60 ದಿನಗಳ ಕಾಲ ನಡೆಯಲಿದೆ. ಸುಮಾರು 200 ಗಂಟೆಗಳ ಕಾಲ, ಬೆಳಗ್ಗೆ 8ರಿಂದ ಸಂಜೆ 6ರವರೆಗೆ ಕಾರ್ಯಾಚರಣೆ ನಡೆಸಲಾಗುತ್ತದೆ. ರಾಜ್ಯದಲ್ಲಿ ಈ ಹಿಂದೆ ಮೂರು ಬಾರಿ ಮೋಡ ಬಿತ್ತನೆ ಕಾರ್ಯ ನಡೆಸಲಾಗಿದ್ದು, ಶೇಕಡ 18ರಿಂದ 20ರಷ್ಟು ಯಶಸ್ಸು ಸಿಕ್ಕಿದೆ. ಈ ಬಾರಿ ಶೇಕಡ 30ರಷ್ಟು ಯಶಸ್ಸಿನ ನಿರೀಕ್ಷೆಯನ್ನು ಸರ್ಕಾರ ಹೊಂದಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !