September 5, 2026
Saturday, September 5, 2026
spot_img

ಪಾದಯಾತ್ರೆಗೆ ದೊರೆಯುತ್ತಿರುವ ಜನಬೆಂಬಲ ಕಂಡು ಸಿಎಂ ಡಿ.ಕೆ.ಶಿವಕುಮಾರ್ ಹತಾಶೆ: ಬಿ.ವೈ.ವಿಜಯೇಂದ್ರ ವಾಗ್ದಾಳಿ

ಹೊಸದಿಗಂತ ವರದಿ ಕೊಪ್ಪಳ:

 ‘ಬಳ್ಳಾರಿ ಚಲೋ’ ಪಾದಯಾತ್ರೆ ಐದನೇ ದಿನಕ್ಕೆ ಕಾಲಿಟ್ಟಿದ್ದು, ದಿನದಿಂದ ದಿನಕ್ಕೆ ಜನಾಂದೋಲನವಾಗಿ ಪರಿವರ್ತನೆಯಾಗುತ್ತಿದೆ ಎಂದು ವಿಜಯೇಂದ್ರ ಹೇಳಿದರು.

ಪಾದಯಾತ್ರೆಗೂ ಮುನ್ನ ಕಾರಟಗಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪಾದಯಾತ್ರೆಗೆ ದೊರೆಯುತ್ತಿರುವ ಜನಬೆಂಬಲ ಕಂಡು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹತಾಶೆಯಿಂದ ಮಾತನಾಡುತ್ತಿದ್ದಾರೆ ಎಂದು ಟೀಕಿಸಿದರು.

ನಮ್ಮ ಹೋರಾಟದ ಪರಿಣಾಮವಾಗಿಯೇ ಮುಖ್ಯಮಂತ್ರಿಗಳು ಹೆಲಿಕಾಪ್ಟರ್ ಮೂಲಕ ಬರ ಪರಿಶೀಲನೆ ನಡೆಸಿದ್ದಾರೆ. ಅಷ್ಟೇ ಅಲ್ಲ, ಜೀವನದಲ್ಲಿ ಮೊದಲ ಬಾರಿಗೆ ಹಸಿರು ಶಾಲು ಹಾಕಿಕೊಂಡು ಉತ್ತರ ಕರ್ನಾಟಕಕ್ಕೆ ಭೇಟಿ ನೀಡಿದ್ದಾರೆ. ಇದು ನಮ್ಮ ಹೋರಾಟಕ್ಕೆ ಸಂದ ದೊಡ್ಡ ಜಯ ಎಂದು ಹೇಳಿದರು.

ಇದನ್ನೂ ಓದಿ:

ಮುಖ್ಯಮಂತ್ರಿಗಳು ತಮಗೆ ನೀಡಿರುವ ಎಚ್ಚರಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಮುಖ್ಯಮಂತ್ರಿ ಸ್ಥಾನಕ್ಕೆ ಗೌರವ ನೀಡುವಂತೆ ನನಗೆ ವಾರ್ನಿಂಗ್ ನೀಡಿದ್ದಾರೆ. ನಾನು ಮುಖ್ಯಮಂತ್ರಿ ಸ್ಥಾನಕ್ಕೆ ಅಗೌರವ ತರುವ ರೀತಿಯಲ್ಲಿ ಮಾತನಾಡಿಲ್ಲ. ರೈತರ ಸಂಕಷ್ಟವನ್ನು ನೋಡಿ ನೋವಿನಿಂದ ಮಾತನಾಡಿದ್ದೇನೆ. ಮುಖ್ಯಮಂತ್ರಿ ಹಾಗೂ ಅವರ ಸ್ಥಾನಕ್ಕೆ ಗೌರವ ಕಳೆಯುವಂತೆ ಯಾವುದೇ ಹೇಳಿಕೆ ನೀಡಿಲ್ಲ ಎಂದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !