ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಾಮಾನ್ಯವಾಗಿ ಭದ್ರತಾ ವಾಹನಗಳ ಬೆಂಗಾವಲಿನಲ್ಲಿ ಸಂಚರಿಸುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶನಿವಾರ ವಿಶೇಷವಾಗಿ ಟ್ರಾವೆಲ್ ಮಾಡಿ ಎಲ್ಲರ ಗಮನ ಸೆಳೆದರು.
ಶ್ರೀರಾಮ್ ಕಾಲೇಜ್ ಆಫ್ ಕಾಮರ್ಸ್ (SRCC)ನ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತೆರಳಿದ ಮೋದಿ, ಈ ಬಾರಿ ದೆಹಲಿ ಮೆಟ್ರೋದಲ್ಲಿ ಪ್ರಯಾಣಿಸಿದರು.
SRCCಯ 100ನೇ ವರ್ಷದ ಸಂಭ್ರಮಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲು ತೆರಳುತ್ತಿದ್ದ ವೇಳೆ ಮೋದಿ ಮೆಟ್ರೋ ಕಾರ್ಡ್ ಹಿಡಿದು ರೈಲಿನಲ್ಲಿ ಪ್ರಯಾಣಿಸಿದರು. ಪ್ರಯಾಣದ ವೇಳೆ ಮೆಟ್ರೋದಲ್ಲಿದ್ದ ಪ್ರಯಾಣಿಕರು ಹಾಗೂ ವಿದ್ಯಾರ್ಥಿಗಳೊಂದಿಗೆ ಅವರು ಸಂವಾದ ನಡೆಸಿದರು. ಪ್ರಧಾನಮಂತ್ರಿಯೇ ತಮ್ಮ ನಡುವೆ ಸಾಮಾನ್ಯ ಪ್ರಯಾಣಿಕರಂತೆ ಮೆಟ್ರೋದಲ್ಲಿ ಸಂಚರಿಸುತ್ತಿರುವುದನ್ನು ಕಂಡು ಸಹ ಪ್ರಯಾಣಿಕರು ಶಾಕ್ ಆಗಿದ್ದಾರೆ.
ಮೆಟ್ರೋ ಪ್ರಯಾಣದ ವೇಳೆ ಮೋದಿ ವಿದ್ಯಾರ್ಥಿಗಳೊಂದಿಗೆ ಮಾತುಕತೆ ನಡೆಸಿ, ಅವರ ಅಭಿಪ್ರಾಯಗಳನ್ನು ಆಲಿಸಿದರು. ಮೋದಿ ಅವರ ಈ ಪ್ರಯಾಣದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲೂ ಬಹಳ ವೈರಲ್ ಆಗಿವೆ.



