ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಣ್ಣ ವಿಮಾನವೊಂದು ಪತನಗೊಂಡು ಇಬ್ಬರು ಮೃತಪಟ್ಟಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಅಮೆರಿಕದ ಕ್ಯಾಲಿಫೋರ್ನಿಯಾದ ಫ್ರೆಸ್ನೋ ನಗರದಲ್ಲಿ ನಡೆದಿದೆ.
ಬ್ಲೈಥ್ ಅವೆನ್ಯೂನಲ್ಲಿರುವ ‘ಸಿಯೆರಾ ಸ್ಕೈ ಪಾರ್ಕ್’ ವಿಮಾನ ನಿಲ್ದಾಣದ ಸಮೀಪ ಈ ದುರ್ಘಟನೆ ಸಂಭವಿಸಿದೆ.
ವಿಮಾನದಲ್ಲಿ ಒಟ್ಟು ನಾಲ್ವರು ಪ್ರಯಾಣಿಸುತ್ತಿದ್ದರು ಎನ್ನಲಾಗಿದ್ದು, ಪತನದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಇಬ್ಬರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ:
ವಿಮಾನ ಪತನಕ್ಕೆ ಇನ್ನೂ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ. ತಾಂತ್ರಿಕ ದೋಷ, ಹಾರಾಟದ ನಿಯಂತ್ರಣ ವ್ಯವಸ್ಥೆಯ ಸಮಸ್ಯೆ ಅಥವಾ ಹವಾಮಾನ ಪರಿಸ್ಥಿತಿ ಸೇರಿದಂತೆ ಹಲವು ಸಾಧ್ಯತೆಗಳನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.
ವಿಮಾನ ನೆಲಕಪ್ಪಳಿಸಿದ ರಭಸಕ್ಕೆ ಸಮೀಪದ ವಿದ್ಯುತ್ ತಂತಿಗಳಿಗೂ ಹಾನಿಯಾಗಿದ್ದು, ಸುತ್ತಮುತ್ತಲಿನ ಕೆಲವು ಮನೆಗಳಲ್ಲಿ ತಾತ್ಕಾಲಿಕವಾಗಿ ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು.



