ಹೊಸದಿಗಂತ ಡಿಜಿಟಲ್ ಡೆಸ್ಕ್:
ಚುನಾವಣಾ ರಾಜಕೀಯದಿಂದ ಮಾತ್ರ ನಾನು ದೂರವಾಗಿರೋದು ಆದ್ರೆ ಸಕ್ರಿಯ ರಾಜಕಾರಣದಲ್ಲಿ ಖಂಡಿತ ಮುಂದುವರಿಯುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟಕ್ಕೆ 25 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಯಸ್ಸಾಗಿದೆ ಅಂತ ನಾನು ಚುನಾವಣೆಗೆ ಸ್ಪರ್ಧಿಸದಿರಲು ನಿರ್ಧರಿಸಿರೋದಲ್ಲ, ಚುನಾವಣೆ ವ್ಯವಸ್ಥೆಯಲ್ಲಿ ಸಮಸ್ಯೆಗಳಿಂದಾಗಿ ನಿವೃತ್ತಿ ಕೊಟ್ಟಿರೋದು ಎಂದರು.
ಕನಿಷ್ಠ ಶೇ.75ರಷ್ಟು ಮೀಸಲಾತಿ ದೊರೆಯಬೇಕು
ಮೀಸಲಾತಿ ವಿಚಾರವಾಗಿಯೂ ಮಾತನಾಡಿದ ಸಿದ್ದರಾಮಯ್ಯ ಕನಿಷ್ಠ ಶೇ.75ರಷ್ಟು ಮೀಸಲಾತಿ ದೊರೆಯಬೇಕು ಎಂದು ಅವರು ಅಭಿಪ್ರಾಯಪಟ್ಟರು. ಲೋಕ ಸಭೆ ಹಾಗೂ ವಿಧಾನ ಸಭೆಗಳಲ್ಲಿ ಸೂಕ್ತ ರಾಜಕೀಯ ಪ್ರಾತಿನಿಧ್ಯ ದೊರೆತಾಗ ಮಾತ್ರ ಹಿಂದುಳಿದ ವರ್ಗಗಳಿಗೆ ರಾಜಕೀಯವಾಗಿ ಪ್ರಾಶಸ್ತ್ಯ ಸಿಗಲಿದೆ ಎಂದರು.
ಇದನ್ನೂ ಓದಿ:
2023ರಲ್ಲಿ ಮತ್ತೆ ಮುಖ್ಯಮಂತ್ರಿಯಾದ ಬಳಿಕ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದ ಮಧುಸೂದನ್ ನಾಯಕ್ ನೇತೃತ್ವದಲ್ಲಿ ಹೊಸದಾಗಿ ಸಮೀಕ್ಷೆ ನಡೆಸಲಾಗಿತ್ತು. ನ್ಯಾಯಾಲಯದ ತಡೆಯಿಂದ ಅಂಕಿಅಂಶಗಳ ಬಿಡುಗಡೆಗೆ ನಿರ್ಬಂಧವಿದ್ದು, ತಡೆ ತೆರವುಗೊಳಿಸಲು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದೆವು ಏನದು ಸಿದ್ದರಾಮಯ್ಯ ತಿಳಿಸಿದರು.
ಸಿಎಂ ನನ್ನ ಮಾತು ಕೇಳುತ್ತಾರೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ನ ನಾಯಕರು ನನ್ನ ಮಾತು ಕೇಳುತ್ತಾರೆ ಅನ್ನೋ ನಂಬಿಕೆ ನನಗಿದೆ. ಹೀಗಾಗಿ ಹಿಂದುಳಿದ ವರ್ಗದವರಿಗೆ ನ್ಯಾಯ ದೊರಕಿಸಿಕೊಡಲು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅವರು ಆಶಿಸಿದರು.



