September 6, 2026
Sunday, September 6, 2026
spot_img

ಬೆಂಗಳೂರಿನಲ್ಲಿ ಅಕ್ರಮ ಔಷಧ ದಂಧೆಗೆ FDA ಶಾಕ್: 4 ಲಕ್ಷಕ್ಕೂ ಅಧಿಕ ಮೌಲ್ಯದ ಮೆಡಿಸಿನ್ ವಶ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ (FDA) ಡ್ರಗ್ಸ್ ಎನ್‌ಫೋರ್ಸ್‌ಮೆಂಟ್ ವಿಂಗ್ ಅಧಿಕಾರಿಗಳು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎರಡು ಕಡೆ ಭರ್ಜರಿ ದಾಳಿ ನಡೆಸಿದ್ದಾರೆ.

ದಾಳಿಯಲ್ಲಿ 4 ಲಕ್ಷಕ್ಕೂ ಅಧಿಕ ಮೌಲ್ಯದ ಔಷಧಗಳನ್ನು ವಶಪಡಿಸಿಕೊಂಡಿದ್ದು, ಅಗತ್ಯ ಪರವಾನಗಿ ಇಲ್ಲದೆ ಔಷಧಗಳನ್ನು ಸಂಗ್ರಹಿಸಿಟ್ಟಿದ್ದ ಆರೋಪದ ಹಿನ್ನೆಲೆಯಲ್ಲಿ ಈ ಕಾರ್ಯಾಚರಣೆ ನಡೆದಿದೆ ಎಂದು ಇಲಾಖೆ ತಿಳಿಸಿದೆ. ದಾಳಿಯ ವೇಳೆ ವಿವಿಧ ರೀತಿಯ ಔಷಧಗಳ ದಾಸ್ತಾನು ಪತ್ತೆಯಾಗಿದ್ದು, ಅವುಗಳ ಒಟ್ಟು ಮೌಲ್ಯ 4 ಲಕ್ಷಕ್ಕೂ ಅಧಿಕ ಎಂದು ಇಲಾಖೆ ತಿಳಿಸಿದೆ.

ಇದನ್ನೂ ಓದಿ:

ಔಷಧ ಪರವಾನಗಿ ನಿಯಮಗಳ ಉಲ್ಲಂಘನೆಯಾಗುತ್ತಿರುವ ಕುರಿತು ಅಧಿಕಾರಿಗಳಿಗೆ ಲಭ್ಯವಾದ ಮಾಹಿತಿಯ ಆಧಾರದ ಮೇಲೆ ಈ ದಾಳಿ ನಡೆಸಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ಮತ್ತು ದೇವನಹಳ್ಳಿ ಪ್ರದೇಶಗಳಲ್ಲಿರುವ ಎರಡು ಇ-ಕಾಮರ್ಸ್ ಶೇಖರಣಾ ಕೇಂದ್ರಗಳನ್ನು ಅಧಿಕಾರಿಗಳು ಪರಿಶೀಲಿಸಿದ್ದಾರೆ.

ಈ ಕೇಂದ್ರಗಳಲ್ಲಿ ಔಷಧಗಳನ್ನು ಸಂಗ್ರಹಿಸಿ ವಿತರಿಸಲಾಗುತ್ತಿತ್ತು ಎನ್ನಲಾಗಿದ್ದು, ಅವುಗಳನ್ನು ಸಂಗ್ರಹಿಸಲು ಅಗತ್ಯವಿರುವ ಮಾನ್ಯ ಔಷಧ ಪರವಾನಗಿ ಹೊಂದಿರದಿರುವುದು ಪ್ರಾಥಮಿಕ ಪರಿಶೀಲನೆಯಲ್ಲಿ ಕಂಡುಬಂದಿದೆ ಎಂದು FDA ಅಧಿಕಾರಿಗಳು ತಿಳಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !