Sunday, September 14, 2025

ಇಷ್ಟು ದಿನ ಕಳೆದರೂ ಗೃಹ ಸಚಿವರು ಏಕೆ ಇನ್ನೂ ಮದ್ದೂರಿಗೆ ಭೇಟಿ ನೀಡಿಲ್ಲ: ಸಂಸದ ಕೃಷ್ಣದತ್ತ ಯದುವೀರ್ ಪ್ರಶ್ನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಗಣೇಶ ಜಲಸ್ತಮಭಾಣ ಮೆರವಣಿಗೆ ವೇಳೆ ಕಲ್ಲು ತೂರಾಟ ಸಂಭವಿಸಿ ಇಷ್ಟು ದಿನ ಕಳೆದರೂ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಏಕೆ ಇನ್ನೂ ಮದ್ದೂರಿಗೆ ಭೇಟಿ ನೀಡಿಲ್ಲ ಎಂದು ಸಂಸದ ಯದುವೀರ್ ಕೃಷ್ಣದತ್ತ ಒಡೆಯರ್ ಪ್ರಶ್ನಿಸಿದ್ದಾರೆ.

ಮಂಡ್ಯದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಘಟನೆಯಿಂದ ಪಟ್ಟಣದಲ್ಲಿ ಪ್ರಕ್ಷುಬ್ದ ವಾತಾವರಣ ನಿರ್ಮಾಣವಾಗಿದ್ದು, ಕಲ್ಲು ತೂರಾಟ ನಡೆಸಿದವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮವಾಗಬೇಕೆಂದು ಎಂದು ಆಗ್ರಹಿಸಿದ್ದಾರೆ.

ಇಂತಹ ಘಟನೆಗಳು ಎಲ್ಲೂ ನಡೆಯದಂತೆ ಪೊಲೀಸ್ ಇಲಾಖೆ ಹಾಗೂ ರಾಜ್ಯ ಸರ್ಕಾರ ಅಗತ್ಯ ಕಾನೂನು ಕ್ರಮ ಕೈಗೊಳ್ಳಬೇಕು. ಮದ್ದೂರು ಸೇರಿದಂತೆ ರಾಜ್ಯದಲ್ಲಿ ಧರ್ಮ ರಕ್ಷಣೆ ನಾವು ಸದಾ ಸಿದ್ದ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ