ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿದ್ಯಾರ್ಥಿಗಳು ಕೇವಲ ಉದ್ಯೋಗ ಹುಡುಕುವವರಾಗಬಾರದು, ಉದ್ಯೋಗ ಸೃಷ್ಟಿಸುವ ಉದ್ಯಮಿಗಳಾಗಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಸೋಮವಾರ ನಡೆದ ರಾಮಯ್ಯ ವಿಜ್ಞಾನ ಮತ್ತು ಮ್ಯಾನೇಜ್‌ಮೆಂಟ್ ಸಂಸ್ಥೆ ಉದ್ಘಾಟನೆ ಹಾಗೂ ನಾರಾಯಣ ಪ್ರಜ್ಞಾಲಯ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಆಡಳಿತವಿರುವ ರಾಜ್ಯದಲ್ಲಿ ನಾವ್ ಯುವಕರ ಆಲೋಚನೆ ಹಾಗೂ ಅಗತ್ಯಗಳಿಗೆ ತಕ್ಕಂತೆ ಶಿಕ್ಷಣದಲ್ಲಿ ಹೊಸ ನೀತಿ ರೂಪಿಸಲು ನಾವು ಮುಂದಾಗಿದ್ದೇವೆ ಎಂದರು.
ಯುವಕರಿಗೆ ಕೌಶಲ್ಯಾಧಾರಿತ ಶಿಕ್ಷಣ
ಈ ಬಗ್ಗೆ ನಮಗೆ ಹೈಕಮಾಂಡ್ ಸೂಚನೆ ನೀಡಿದ್ದರು, ಹೀಗಾಗಿ ನಮ್ಮ ಆಡಳಿತವಿರುವ ನಾಲ್ಕು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಲು ತೀರ್ಮಾನಿಸಲಾಗಿತ್ತು ಆದರೆ ಕೊನೆಯ ಕ್ಷಣದಲ್ಲಿ ಸಭೆ ರದ್ದಾಯಿತು. ಯುವಕರಿಗೆ ಕೌಶಲ್ಯಾಧಾರಿತ ಶಿಕ್ಷಣ ನೀಡುವ ಮೂಲಕ ದೇಶದ ಅಭಿವೃದ್ಧಿಗೆ ಕೊಡುಗೆ ನೀಡುವ ಅವಕಾಶ ಕಲ್ಪಿಸಬೇಕು ಎಂದು ಶಿವಕುಮಾರ್ ಅಭಿಪ್ರಾಯಪಟ್ಟರು.
ಇದನ್ನೂ ಓದಿ:
ನಮ್ಮ ಪ್ರತಿಭೆಗಳಿಗೆ ಬೇಡಿಕೆ ಇದೆ
ನಮ್ಮ ಕರ್ನಾಟಕದ ಪ್ರತಿಭೆಗಳಿಗೆ ಬಹಳ ಬೇಡಿಕೆ ಇದೆ. ಭಾರತದ್ಲಲಿ ಒಟ್ಟು 138 ಅಂತಾರಾಷ್ಟ್ರೀಯ ಶಾಲೆಗಳಿದ್ದು, ಅದರಲ್ಲಿ 37 ಶಾಲೆಗಳು ಕರ್ನಾಟಕದಲ್ಲಿಯೇ ಇದೆ. ಪ್ರತಿ ವರ್ಷ ಸುಮಾರು 20,000 ಎಂಜಿನಿಯರ್‌ಗಳು ಹಾಗೂ 59 ವೈದ್ಯಕೀಯ ಕಾಲೇಜುಗಳಿಂದ 13,940 ವೈದ್ಯರು ಹೊರಬರುತ್ತಿದ್ದಾರೆ ಎಂದು ತಿಳಿಸಿದರು.
ಸಿಲಿಕಾನ್ ಸಿಟಿ ಉದ್ಯಮಿಗಳ ಫೇವರಿಟ್ ತಾಣ
ಬೆಂಗಳೂರು ಜಾಗತಿಕ ಉದ್ಯಮಿಗಳ ನೆಚ್ಚಿನ ತಾಣವಾಗಿದ್ದು, ನಗರದ ಶಿಕ್ಷಣ, ಜ್ಞಾನ, ಪ್ರತಿಭೆ ಮತ್ತು ಕೌಶಲ್ಯ ಇದಕ್ಕೆ ಪ್ರಮುಖ ಕಾರಣ ಎಂದರು. ಸಿಲಿಕಾನ್ ವ್ಯಾಲಿಗಿಂತಲೂ ಬೆಂಗಳೂರಿನಲ್ಲಿ ಹೆಚ್ಚಿನ ಸಂಖ್ಯೆಯ ಐಟಿ ವೃತ್ತಿಪರರು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಹೇಳಿದರು.



