September 7, 2026
Monday, September 7, 2026
spot_img

ವಾಲ್ಮೀಕಿ ಹಗರಣ: ED ವಿಚಾರಣೆಗೆ ಹಾಜರಾದ ಮಾಜಿ ಸಚಿವ ಬಿ. ನಾಗೇಂದ್ರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಇಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಮುಂದೆ ಹಾಜರಾಗಿದ್ದಾರೆ.

ಪ್ರಕರಣದಲ್ಲಿ ಚಾರ್ಜ್‌ಶೀಟ್‌ ಸಲ್ಲಿಕೆಯಾದ ಬಳಿಕ ಹೆಚ್ಚಿನ ಮಾಹಿತಿಗಾಗಿ ನಾಗೇಂದ್ರ ಅವರಿಗೆ ಸಮನ್ಸ್‌ ನೀಡಲಾಗಿತ್ತು. ಈ ಕಾರಣಕ್ಕಾಗಿ ಜಾಲಹಳ್ಳಿಯಲ್ಲಿರುವ ED ಕಚೇರಿಗೆ ಆಗಮಿಸಿದ ನಾಗೇಂದ್ರ ಅವರನ್ನು ಅಧಿಕಾರಿಗಳು ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದರು.

ಹೆಚ್ಚುವರಿ ಚಾರ್ಜ್‌ಶೀಟ್‌ ಸಾಧ್ಯತೆ

ತನಿಖೆ ವೇಳೆ ಸಂಗ್ರಹಿಸಿರುವ ದಾಖಲೆಗಳು ಮತ್ತು ಸಾಕ್ಷ್ಯಗಳ ಹಿನ್ನೆಲೆಯಲ್ಲಿ ನಾಗೇಂದ್ರ ಅವರ ಹೇಳಿಕೆಗಳನ್ನು ಪರಿಶೀಲಿಸುವ ಸಾಧ್ಯತೆಯೂ ಇದೆ. ಮುಂದಿನ ತನಿಖೆ ಪೂರ್ಣಗೊಂಡ ಬಳಿಕ ಪ್ರಕರಣದಲ್ಲಿ ಹೆಚ್ಚುವರಿ ಚಾರ್ಜ್‌ಶೀಟ್‌ ಸಲ್ಲಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ:

CBI, ED ಹಾಗೂ SITಯಿಂದ ತನಿಖೆ

ಈ ಪ್ರಕರಣವನ್ನು CBI, ED ಹಾಗೂ ರಾಜ್ಯದ SIT ತನಿಖೆ ನಡೆಸುತ್ತಿವೆ. ತನಿಖಾ ಸಂಸ್ಥೆಗಳು ಹಲವು ಸ್ಥಳಗಳಲ್ಲಿ ದಾಳಿ ನಡೆಸಿ, ಕೆಲವು ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದ ಅಧಿಕಾರಿಗಳು ಹಾಗೂ ಬ್ಯಾಂಕ್ ಸಿಬ್ಬಂದಿಯನ್ನೂ ಬಂಧಿಸಿವೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !