September 7, 2026
Monday, September 7, 2026
spot_img

ಗೃಹಪ್ರವೇಶಕ್ಕೆ ಹೊರಟಿದ್ದ ಯುವಕನ ಬರ್ಬರ ಹ*ತ್ಯೆ: ತಲೆಗೆ ಕಲ್ಲು ಎತ್ತಿಹಾಕಿ ಕೊಂ*ದ ದುಷ್ಕರ್ಮಿಗಳು

ಹೊಸದಿಗಂತ ವರದಿ ಹಾಸನ:

ಗೃಹಪ್ರವೇಶದ ಸಂಭ್ರಮಕ್ಕೆ ತೆರಳುತ್ತಿದ್ದ ಯುವಕನನ್ನು ದುಷ್ಕರ್ಮಿಗಳು ಹಾಡಹಗಲೇ ಮಾರಣಾಂತಿಕವಾಗಿ ದಾಳಿ ನಡೆಸಿ, ತಲೆಯ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಗರದ ಚನ್ನಪಟ್ಟಣ ವೃತ್ತದ ಸಮೀಪದ ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿ-75ರಲ್ಲಿ ನಡೆದಿದೆ.

ಹರಳಹಳ್ಳಿ ಗ್ರಾಮದ ಮಣಿ ಅಲಿಯಾಸ್ ಮಣಿಕಂಠ (35) ಮೃತ ದುರ್ದೈವಿ. ನಗರದ 80 ಅಡಿ ರಸ್ತೆಯಲ್ಲಿರುವ ಪೆಟ್ರೋಲ್ ಬಂಕ್‌ನಲ್ಲಿ ಕೆಲಸ ಮಾಡುತ್ತಿದ್ದ ಮಣಿಕಂಠ, ತಮ್ಮದೇ ಹೊಸ ಮನೆಯ ಗೃಹಪ್ರವೇಶ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಎನ್ನಲಾಗಿದೆ. ಚನ್ನಪಟ್ಟಣ ವೃತ್ತದ ಸಮೀಪ ದುಷರ್ಮಿಗಳು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ತಲೆಯ ಮೇಲೆ ದೊಡ್ಡ ಕಲ್ಲು ಎತ್ತಿಹಾಕಿ ಹತ್ಯೆ ಮಾಡಲಾಗಿದೆ.

ಸಂಭ್ರಮದ ಮನೆಗೆ ತೆರಳುತ್ತಿದ್ದ ವ್ಯಕ್ತಿ ಕೆಲವೇ ಕ್ಷಣಗಳಲ್ಲಿ ಹೆಣವಾಗಿರುವುದು ಕುಟುಂಬಸ್ಥರನ್ನು ದಿಗ್ಭ್ರಮೆಗೊಳಿಸಿದೆ. ಗೃಹಪ್ರವೇಶದ ಸಿದ್ಧತೆಯಲ್ಲಿದ್ದ ಕುಟುಂಬದಲ್ಲಿ ಇದೀಗ ಆಕ್ರಂದನ ಮುಗಿಲುಮುಟ್ಟಿದೆ. ಹಾಡಹಗಲೇ ರಾಷ್ಟ್ರೀಯ ಹೆದ್ದಾರಿಯಲ್ಲೇ ನಡೆದ ಕೊಲೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶುಭಾನ್ವಿತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !