ಹೊಸದಿಗಂತ ವರದಿ ಹಾಸನ:
ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ ಭವನದ ಕುವೆಂಪು ಸಭಾಂಗಣದಲ್ಲಿ ಸಮರ್ಥ ಸಾಹಿತ್ಯ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನ ವತಿಯಿಂದ ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಹಾಸನ ಜಿಲ್ಲೆಯ ಇಬ್ಬರು ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಸಾಮಾಜಿಕ ಕಾರ್ಯ ವಿಭಾಗದಲ್ಲಿ ತಣ್ಣೀರುಹಳ್ಳದ ಮೋಹನ್ ಕುಮಾರ್ ಹಾಗೂ ಸಂಗೀತ ಕ್ಷೇತ್ರದಲ್ಲಿ ವಾಣಿ ನಾಗೇಂದ್ರ ಅವರು ನಾಡಪ್ರಭು ಕೆಂಪೇಗೌಡ ಪ್ರಶಸ್ತಿಗೆ ಭಾಜನರಾದರು.
ಇದನ್ನೂ ಓದಿ:
ಬೇಲಿಮಠ ಮಹಾಸಂಸ್ಥಾನದ ಶಿವಾನುಭವ ಚರಮೂರ್ತಿ ಶ್ರೀ ಶಿವರುದ್ರ ಸ್ವಾಮೀಜಿ, ಪ್ರತಿಷ್ಠಾನದ ಅಧ್ಯಕ್ಷ ಎಸ್.ಆರ್. ವಿಜಯ ಸಮರ್ಥ, ಪ್ರೊ. ಎ.ಆರ್. ಶಿವಕುಮಾರ್, ಶಿವಾನಂದ ತಗಡೂರು, ಭಾರತಿ ಎಂ. ಪ್ರಕಾಶ್, ರಾಜು ಚಲವಾದಿ ಹಾಗೂ ಸಿ.ಯು. ಮಂಜುನಾಥ ಸೇರಿದಂತೆ ಗಣ್ಯರು ಪ್ರಶಸ್ತಿ ಪ್ರದಾನ ಮಾಡಿದರು.



