September 8, 2026
Tuesday, September 8, 2026
spot_img

ಸೆ.22 ರಂದು 72 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ, ಈ ಬಾರಿ ಕಾರ್ಯಕ್ರಮ ನಡೆಯೋದೆಲ್ಲಿ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಇದೇ ತಿಂಗಳ 22ನೇ ತಾರೀಖಿನಂದು ಗುಜರಾತ್‌ನಲ್ಲಿ 72 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಪ್ರತೀ ವರ್ಷವೂ ದೆಹಲಿಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವನ್ನು ಈ ಬಾರಿ ಗುಜರಾತ್‌ನ ಕೆವಾಡಿಯಲ್ಲಿ ನಡೆಸಲು ತೀರ್ಮಾನಿಸಲಾಗಿದೆ.

ಹಲವಾರು ವರ್ಷಗಳಿಂದ ಸಾಂಪ್ರದಾಯಿಕವಾಗಿ ದೆಹಲಿಯಲ್ಲಿಯೇ ನಡೆಯುತ್ತಿದ್ದ ಕಾರ್ಯಕ್ರಮವನ್ನು ಈ ಬಾರಿ ಗುಜರಾತ್‌ಗೆ ಶಿಫ್ಟ್‌ ಮಾಡಲಾಗಿದೆ. ಸತತ 72 ವರ್ಷಗಳಿಂದ ದೆಹಲಿಯ ವಿಜ್ಞಾನ ಭವನದಲ್ಲಿ ನಡೆಯುತ್ತಿರುವ ಕಾರ್ಯಕ್ರಮ ಈ ಬಾರಿ ಗುಜರಾತ್‌ನ ಏಕ್ತಾ ನಗರದಲ್ಲಿ ನಡೆಯಲಿದೆ. ಇಲ್ಲಿ ಮೊದಲ ಬಾರಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯುವ ಕಾರಣ ಸಕಲ ಸಿದ್ಧತೆಗಳು ನಡೆಯುತ್ತಿವೆ.

ಈ ಬಾರಿ ಗುಜರಾತ್‌ನಲ್ಲಿ ಕಾರ್ಯಕ್ರಮ ಮಾಡುವ ನಿರ್ಧಾರ ತೆಗೆದುಕೊಂಡಿದ್ದಕ್ಕೆ ಕಾರಣವಿದೆ. ಈ ಬಾರಿ ಇದೇ ಸಮಯದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಗುಜರಾತ್‌ಗೆ ಭೇಟಿ ನೀಡಲಿದ್ದಾರೆ. ಅವರ ಪ್ರವಾಸದ ಭಾಗವಾಗಿ ಕಾರ್ಯಕ್ರಮವನ್ನು ಗುಜರಾತ್‌ನಲ್ಲಿ ಮಾಡಲು ನಿರ್ಧರಿಸಲಾಗಿದೆ ಎನ್ನುವ ಮಾಹಿತಿ ದೊರಕಿದೆ.

ಚಂದು ಚಾಂಪಿಯನ್‌ ಸಿನಿಮಾದ ನಟನೆಗಾಗಿ ಕಾರ್ತಿಕ್‌ ಆರ್ಯನ್‌ಗೆ ಹಾಗೂ ಬ್ರಹ್ಮಯುಗಂ ನಟನೆಗಾಗಿ ಮಮ್ಮುಟ್ಟಿ ಅವರಿಗೆ ಜಂಟಿಯಾಗಿ ಅತ್ಯುತ್ತಮ ನಟ ಪ್ರಶಸ್ತಿಯನ್ನು ನೀಡಲಾಗುತ್ತದೆ. ‘ಆರ್ಟಿಕಲ್ 370’ ಅತ್ಯುತ್ತಮ ಫೀಚರ್ ಫಿಲ್ಮ್ ಪ್ರಶಸ್ತಿಯನ್ನು ಪಡೆದರೆ, ಯಾಮಿ ಗೌತಮ್ ತಮ್ಮ ಅಭಿನಯಕ್ಕಾಗಿ ಅತ್ಯುತ್ತಮ ನಟಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡರು.

ಸೆ.22ರಂದು ನಡೆಯುವ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಪ್ರಶಸ್ತಿ ವಿಜೇತರನ್ನು ಗೌರವಿಸಲಾಗುತ್ತದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕಲಾವಿದರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !