September 8, 2026
Tuesday, September 8, 2026
spot_img

‘ಮುಂದಿನ SpaceTech ಹಬ್ ಕರ್ನಾಟಕವೇ’: ISRO ಸಹಕಾರಕ್ಕೆ ಅಜಯ್ ಧರಂ ಸಿಂಗ್ ಒತ್ತು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಾಹ್ಯಾಕಾಶ ಕ್ಷೇತ್ರದಲ್ಲಿ ಕರ್ನಾಟಕದ ಪಾತ್ರವನ್ನು ಮತ್ತಷ್ಟು ವಿಸ್ತರಿಸಲು ರಾಜ್ಯ ಸರ್ಕಾರ ಮುಂದಾಗಿದೆ.

ISRO, SpaceTech, DeepTech ಹಾಗೂ ಬಾಹ್ಯಾಕಾಶ ಆಧಾರಿತ ಸ್ಟಾರ್ಟಪ್‌ಗಳ ಬೆಳವಣಿಗೆಗೆ ಅಗತ್ಯವಿರೋ ಎಲ್ಲಾ ಸಹಕಾರ ನೀಡಲು ನಮ್ಮ ಸರ್ಕಾರ ಸಿದ್ಧವಾಗಿದೆ ಎಂದು ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ. ಅಜಯ್ ಧರಂ ಸಿಂಗ್ ಹೇಳಿದ್ದಾರೆ.

ಮಂಗಳವಾರ ಬೆಂಗಳೂರಿನಲ್ಲಿ ಇಸ್ರೋ ಅಧ್ಯಕ್ಷ ಹಾಗೂ ಬಾಹ್ಯಾಕಾಶ ಇಲಾಖೆಯ ಕಾರ್ಯದರ್ಶಿ ಡಾ. ವಿ. ನಾರಾಯಣನ್ ಅವರನ್ನು ಭೇಟಿ ಮಾಡಿದ ಸಚಿವರು GSLV-F17/EOS-05 ಯಶಸ್ವಿ ಉಡಾವಣೆಯ ಹಿನ್ನಲೆಯಲ್ಲಿ ಅಭಿನಂದನೆ ವ್ಯಕ್ತಪಡಿಸಿದರು.

ಇದನ್ನೂ ಓದಿ:

ಇಸ್ರೋದ ವಿಜ್ಞಾನಿಗಳು, ಎಂಜಿನಿಯರ್‌ಗಳು ಹಾಗೂ ತಾಂತ್ರಿಕ ತಂಡದ ಸಾಧನೆಯನ್ನು ಶ್ಲಾಘಿಸಿದ ಅವರು, ಈ ಯಶಸ್ಸು ಭಾರತದ ವೈಜ್ಞಾನಿಕ ಮತ್ತು ತಾಂತ್ರಿಕ ಸಾಮರ್ಥ್ಯಕ್ಕೆ ಮತ್ತೊಂದು ಮೈಲಿಗಲ್ಲಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದೂರವಾಣಿ ಮೂಲಕ ಇಸ್ರೋ ಅಧ್ಯಕ್ಷ ಡಾ. ವಿ. ನಾರಾಯಣನ್ ಅವರೊಂದಿಗೆ ಮಾತನಾಡಿ ಯಶಸ್ವಿ ಉಡಾವಣೆಗೆ ಅಭಿನಂದನೆ ಸಲ್ಲಿಸಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !