September 10, 2026
Thursday, September 10, 2026
spot_img

ED ದಾಳಿ ಬಳಿಕ ಸುದ್ದಿಗೋಷ್ಠಿ: ‘2 ಕೋಟಿ ರೂ. ನಗದು ತೆಗೆದುಕೊಂಡು ಹೋಗಿದ್ದಾರೆ’ ಎಂದ ಜಾರಕಿಹೊಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಳೆದ 2 ದಿನಗಳಿಂದ ಇಡಿ ಅಧಿಕಾರಿಗಳು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸ ಸೇರಿದಂತೆ 18 ಸ್ಥಳಗಳಲ್ಲಿ ತೀವ್ರ ಶೋಧ ಕಾರ್ಯಾಚರಣೆ ನಡೆಸಿದ್ದು, 3 ಕೋಟಿ ನಗದು, ಚಿನ್ನ-ಬೆಳ್ಳಿ ಹಾಗೂ ಹಲವು ದಾಖಲೆಗಳು ಪತ್ತೆಯಾಗಿವೆ ಎಂದು ಮೂಲಗಳು ತಿಳಿಸಿವೆ.

ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಫೆಮಾ) ಉಲ್ಲಂಘಿಸಿ ವಿದೇಶದಲ್ಲಿ ಅಕ್ರಮ ಹೂಡಿಕೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಇಡಿ ದಾಳಿ ನಡೆಸಿತ್ತು.

ಇದನ್ನೂ ಓದಿ:

ಸುಮಾರು 34 ಗಂಟೆಗಳ ಕಾರ್ಯಾಚರಣೆಯಲ್ಲಿ 3 ಕೋಟಿ ನಗದು, ಚಿನ್ನ-ಬೆಳ್ಳಿ ಹಾಗೂ ಹಲವು ದಾಖಲೆಗಳು ಪತ್ತೆಯಾಗಿವೆ. ಅಷ್ಟೇ ಅಲ್ಲದೆ ಸತೀಶ್ ಅವರ ಪುತ್ರಿ ಹಾಗೂ ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಅವರ ನಿವಾಸದಲ್ಲಿ 1.2 ಕೋಟಿ ನಗದು ಪತ್ತೆಯಾಗಿದೆ ಎನ್ನಲಾಗಿದೆ.

ಇಡಿ ದಾಳಿ ಬಳಿಕ ಸುದ್ದಿಗೋಷ್ಠಿ ನಡೆಸಿದ ಸತೀಶ್ ಜಾರಕಿಹೊಳಿ, 2 ಕೋಟಿ ನಗದು ಹಾಗೂ ಹಲವು ದಾಖಲೆಗಳನ್ನು ತೆಗೆದುಕೊಂಡು ಹೋಗಿದ್ದಾರೆ. ಪತ್ತೆಯಾದ ಹಣ ನಮ್ಮದೇ, ಅದಕ್ಕೆ ಸರಿಯಾದ ದಾಖಲೆ ಕೊಟ್ಟಿದ್ದೇನೆ. ಇಡಿ ಕೇಳಿರುವ ಎಲ್ಲ ಪ್ರಶ್ನೆಗಳಿಗೆ ಉತ್ತರಿಸಲು ಸಿದ್ಧ ಅಂದು ಅವರು ಹೇಳಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !