Monday, September 15, 2025

ಪಹಲ್ಗಾಮ್‌ ಸಂತ್ರಸ್ತರು, ನಮ್ಮ ಸೇನೆಗೆ ಗೆಲುವನ್ನು ಅರ್ಪಿಸಿದ ಟೀಂ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಪಹಲ್ಗಾಮ್‌ ದಾಳಿ ನಂತರ ಟೀಂ ಇಂಡಿಯಾ ಹಾಗೂ ಪಾಕಿಸ್ತಾನ ಮ್ಯಾಚ್‌ ಪ್ರಾಮುಖ್ಯತೆ ಪಡೆದುಕೊಂಡಿತ್ತು. ಮ್ಯಾಚ್‌ ನಡೀಬಾರ್ದು ಎನ್ನುವ ಮಾತಿನ ಮಧ್ಯೆ ಪಂದ್ಯ ನಡೆದುಹೋಗಿದೆ. ಟೀಂ ಇಂಡಿಯಾ ಗೆದ್ದು ಬೀಗಿದೆ.

ಟೀಂ ಇಂಡಿಯಾ ಆಟಗಾರರು ಈ ಗೆಲುವನ್ನು ಪಹಲ್ಗಾಮ್‌ ಸಂತ್ರಸ್ತರು ಹಾಗೂ ನಮ್ಮ ಸೇನೆಗೆ ಅರ್ಪಿಸಿದ್ದಾರೆ.
ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಪಂದ್ಯದ ನಂತರದ ಸಂದರ್ಶನದಲ್ಲಿ ನೀಡಿದ ಹೇಳಿಕೆಯಿಂದ ಎಲ್ಲರ ಹೃದಯ ಗೆದ್ದರು.

ಈ ಗೆಲುವನ್ನು ಭಾರತೀಯ ಭದ್ರತಾ ಪಡೆಗಳಿಗೆ ಅರ್ಪಿಸಿದರು ಮತ್ತು ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಪ್ರಾಣ ಕಳೆದುಕೊಂಡವರೊಂದಿಗೆ ನಿಲ್ಲುವ ಬಗ್ಗೆಯೂ ಮಾತನಾಡಿದರು. ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್​ನಲ್ಲಿ ಮಾತನಾಡಿದ ಸೂರ್ಯ, ಒಂದು ವಿಷಯ ಹೇಳಲು ಬಯಸಿದ್ದೆ. ಇದು ಸೂಕ್ತ ಅವಕಾಶ, ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳೊಂದಿಗೆ ನಾವು ನಿಲ್ಲುತ್ತೇವೆ. ನಾವು ನಮ್ಮ ಒಗ್ಗಟ್ಟನ್ನು ವ್ಯಕ್ತಪಡಿಸುತ್ತೇವೆ ಎಂದು ಹೇಳಿದರು.

ಮಾತು ಮುಂದುವರೆಸಿದ ಭಾರತೀಯ ನಾಯಕ, ಈ ವಿಜಯವನ್ನು ನಮ್ಮ ಎಲ್ಲಾ ಸಶಸ್ತ್ರ ಪಡೆಗಳಿಗೆ ಅರ್ಪಿಸಲು ಬಯಸುತ್ತೇನೆ, ಅವರು ಅದಮ್ಯ ಧೈರ್ಯವನ್ನು ತೋರಿಸಿದ್ದಾರೆ. ಅವರು ನಮಗೆ ಸದಾ ಸ್ಫೂರ್ತಿ ನೀಡುತ್ತಲೇ ಇರುತ್ತಾರೆ ಎಂದು ಭಾವಿಸುತ್ತೇವೆ ಮತ್ತು ನಮಗೆ ಅವಕಾಶ ಸಿಕ್ಕಾಗಲೆಲ್ಲಾ ನಾವು ಅವರಿಗೆ ಮೈದಾನದಲ್ಲಿ ನಗಲು ಹೆಚ್ಚಿನ ಕಾರಣಗಳನ್ನು ನೀಡುತ್ತೇವೆ ಎಂದು ಹೇಳಿದರು.

ಇದನ್ನೂ ಓದಿ