ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಚಿವ ಸತೀಶ್ ಜಾರಕಿಹೊಳಿ ಯಾವುದೇ ತಪ್ಪು ಮಾಡಿಲ್ಲ, ನಡೆದಿರೋ ವ್ಯವಹಾರ ಎಲ್ಲ ಕಾನೂನು ಚೌಕಟ್ಟಿನಲ್ಲೇ ಇದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ನಿಯಮ ಎಲ್ಲಿದೆ?
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾರಕಿಹೊಳಿ ನಮ್ಮ ಸಹೋದ್ಯೋಗಿ ಅವರು ಕಾನೂನುಬದ್ಧವಾಗಿ ವ್ಯವಹಾರ ಮಾಡಿದ್ದಾರೆ. ಇಡೀ ಕಾಂಗ್ರೆಸ್ ಪಕ್ಷವನ್ನು ಟ್ರ್ಯಾಪ್ ಮಾಡಲು ಸಿದ್ಧತೆ ನಡೆಯುತ್ತಿದೆ. ನಮ್ಮವರು ಹೊರಗಡೆ ಹೋಗಬಾರದು, ವ್ಯವಹಾರ ಮಾಡಬಾರದು ಎಂಬ ನಿಯಮ ಎಲ್ಲಿದೆ? ಈ ED ದಾಳಿ ರಾಜಕೀಯ ಎಂದರು.
ಇದನ್ನೂ ಓದಿ:
ಕಾಂಗ್ರೆಸ್ ಪಕ್ಷವೇ ಟಾರ್ಗೆಟ್
ಇನ್ನೂ ಮೂರ್ನಾಲ್ಕು ಕಾಂಗ್ರೆಸ್ ನಾಯಕರ ಮೇಲೆ ದಾಳಿ ನಡೆಯುವ ಸಾಧ್ಯತೆಯಿದೆ. ಬಿಜೆಪಿಯವರ ಮೇಲೆ ಯಾವುದೇ ದಾಳಿ ನಡೆಯುತ್ತಿಲ್ಲ. ಒಂದು ಸಮುದಾಯ ಅಥವಾ ಕೆಲ ನಾಯಕರನ್ನು ಮಾತ್ರವಲ್ಲ, ಇಡೀ ಕಾಂಗ್ರೆಸ್ ಪಕ್ಷವನ್ನೇ ಗುರಿಯಾಗಿಸಲಾಗಿದೆ ಎಂದು ಅವರು ಆರೋಪಿಸಿದರು.
‘ವಂದೇ ಮಾತರಂ’ ಬಗ್ಗೆ ಸ್ಪಷ್ಟನೆ
‘ವಂದೇ ಮಾತರಂ’ ಗೀತೆಯ ಚರಣಗಳನ್ನು ಮೊಟಕುಗೊಳಿಸಿರುವ ವಿಚಾರದ ಕುರಿತು ಪ್ರತಿಕ್ರಿಯಿಸಿದ ಡಿಕೆಶಿ, ಈ ಬಗ್ಗೆ ನಮ್ಮ ಕಾಂಗ್ರೆಸ್ ಪಕ್ಷದ ನಿಲುವು ಸ್ಪಷ್ಟವಾಗಿದೆ. ಈ ವಿಚಾರದಲ್ಲಿ ಕೂಡ ರಾಜಕೀಯ ನಡೆಯುತ್ತಿದೆ ಅಷ್ಟೇ ಎಂದರು.



