ಹೊಸದಿಗಂತ ಡಿಜಿಟಲ್ ಡೆಸ್ಕ್:
ಎಡಭಾಗದ ಎಂಜಿನ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಭೋಪಾಲ್‌ನಿಂದ ದೆಹಲಿಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನವನ್ನು ಭಾನುವಾರ ಜೈಪುರ ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್ ಮಾಡಿದ ಘಟನೆ ನಡೆದಿದೆ.
ಸೆಪ್ಟೆಂಬರ್ 13ರಂದು ಕಾರ್ಯಾಚರಣೆ ನಡೆಸುತ್ತಿದ್ದ AI1886 ವಿಮಾನದಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬೆಳಗ್ಗೆ ಸುಮಾರು 9.40ಕ್ಕೆ ಜೈಪುರ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಲ್ಯಾಂಡ್ ಮಾಡಲಾಗಿದ್ದು, ವಿಮಾನದ ಸಂಪೂರ್ಣ ತಪಾಸಣೆ ನಡೆಸಲಾಗುತ್ತಿದೆ ಎಂದು ಏರ್ ಇಂಡಿಯಾ ತಿಳಿಸಿದೆ.
ಇದನ್ನೂ ಓದಿ:
ಅನಿರೀಕ್ಷಿತ ತಾಂತ್ರಿಕ ಸಮಸ್ಯೆಯಿಂದ ಪ್ರಯಾಣಿಕರಿಗೆ ಉಂಟಾದ ಅನಾನುಕೂಲತೆಗೆ ಏರ್ ಇಂಡಿಯಾ ವಿಷಾದ ವ್ಯಕ್ತಪಡಿಸಿದೆ. ವಿಮಾನಯಾನ ಸಂಸ್ಥೆಯ ಮೂಲಗಳ ಪ್ರಕಾರ, ಜೈಪುರದಲ್ಲಿ ಇಳಿದ ಬಳಿಕ ಪ್ರಯಾಣಿಕರನ್ನು ರಸ್ತೆ ಮಾರ್ಗದ ಮೂಲಕ ದೆಹಲಿಗೆ ಕಳುಹಿಸಲಾಯಿತು. ಅವರು ಈಗಾಗಲೇ ದೆಹಲಿ ತಲುಪಿದ್ದಾರೆ ಎನ್ನಲಾಗಿದೆ.
ತಾಂತ್ರಿಕ ದೋಷ ಕಾಣಿಸಿಕೊಂಡ ವಿಮಾನವನ್ನು ಜೈಪುರ ವಿಮಾನ ನಿಲ್ದಾಣದಲ್ಲೇ ಇರಿಸಲಾಗಿದ್ದು, ಅದರ ಎಂಜಿನ್ ಸೇರಿದಂತೆ ಅಗತ್ಯ ಭಾಗಗಳ ಪರಿಶೀಲನೆ ಮುಂದುವರಿದಿದೆ.



