March 25, 2026
Wednesday, March 25, 2026
spot_img

SHOCKING | ಹಠಾತ್ ಕೈಕೊಟ್ಟ ಇಂಜಿನ್: ಉಳ್ಳಾಲದ ಸಮುದ್ರ ದಡಕ್ಕೆ ಬಡಿದು ಮೀನುಗಾರಿಕಾ ಬೋಟ್ ಪಲ್ಟಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹಠಾತ್ತನೆ ಇಂಜಿನ್ ವೈಫಲ್ಯಕ್ಕೀಡಾಗಿ ಮೀನುಗಾರಿಕಾ ಬೋಟ್ ಸಮುದ್ರ ತಟದ ಕಲ್ಲು ಬಂಡೆಗಳಿಗೆ ಬಡಿದು ಪಲ್ಟಿ ಹೊಡೆದ ಆಘಾತಕಾರಿ ಘಟನೆ ಉಳ್ಳಾಲ ಸೀಗ್ರೌಂಡಲ್ಲಿ ಇಂದು (ಸೋಮವಾರ) ಮುಂಜಾನೆ ನಡೆದಿದೆ.

ಚಾಲಕ ಸೇರಿ ಬೋಟಲ್ಲಿದ್ದ ಹದಿಮೂರು ಮಂದಿ ಮೀನುಗಾರರು ಈಜಿಕೊಂಡು ದಡ ಸೇರಿ ತಮ್ಮ ಪ್ರಾಣ ರಕ್ಷಿಸಿಕೊಂಡಿದ್ದಾರೆ.ಅಶ್ಫಕ್ ಎಂಬವರ ಮಾಲಕತ್ವದ ಬುರಖ್ ಹೆಸರಿನ ಮೀನುಗಾರಿಕಾ ಬೋಟ್ ದುರಂತಕ್ಕೀಡಾಗಿದೆ.

ಇಂದು ಮುಂಜಾನೆ 2.30 ಗಂಟೆಗೆ ಮಂಗಳೂರಿನ ಧಕ್ಕೆಯಿಂದ ಹದಿಮೂರು ಮಂದಿಯನ್ನ ಹೊತ್ತ ಈ ಬೋಟ್ ಮೀನುಗಾರಿಕೆಗೆ ತೆರಳಿತ್ತು.‌ ಬೋಟ್ ಉಳ್ಳಾಲ ಸೀಗ್ರೌಂಡ್ ಬಳಿ ಬರುತ್ತಿದ್ದಂತೆ ಏಕಾಏಕಿ ಇಂಜಿನ್ ಆಫ್ ಆಗಿದೆ. ಈ ವೇಳೆ ನಿಯಂತ್ರಣ ಕಳಕೊಂಡ ಬೋಟ್ ತೀರ ಪ್ರದೇಶದಲ್ಲಿ ಕಡಲ್ಕೊರೆತದ ತಾತ್ಕಾಲಿಕ ತಡೆಗೆಂದು ಹಾಕಲಾಗಿದ್ದ ಕಲ್ಲುಬಂಡೆಗಳಿಗೆ ಬಡಿದು ಪಲ್ಟಿ ಹೊಡೆದಿದೆಯೆಂದು ಬೋಟ್ ನ ವ್ಯವಸ್ಥಾಕರಾದ ಖಲೀಲ್ ಮಾಹಿತಿ ನೀಡಿದ್ದಾರೆ.

ಘಟನೆಯಿಂದ ಬೋಟ್ ಸಂಪೂರ್ಣವಾಗಿ ಹಾನಿಗೊಳಗಾಗಿದ್ದು ಮೀನಿನ ಬಲೆ, ಇನ್ನಿತರ ಬೆಲೆಬಾಳುವ ಸೊತ್ತು ಸೇರಿ ಸುಮಾರು ಒಂದೂವರೆ ಕೋಟಿಯಷ್ಟು ನಷ್ಟ ಸಂಭವಿಸಿದೆ ಎನ್ನಲಾಗಿದೆ. ಉಳ್ಳಾಲ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !