ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರದಲ್ಲಿ ದೊಡ್ಡ ಮಂತ್ರಿ ಸ್ಥಾನ ಸಿಕ್ಕಿರುವುದನ್ನು ಬಳಸಿಕೊಂಡು ಕರ್ನಾಟಕದ ಜನರಿಗೆ ಉದ್ಯೋಗ ಕಲ್ಪಿಸುವ ಕೆಲಸ ಮಾಡಲಿ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿಗೆ ಸವಾಲು ಹಾಕಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಡಿಕೆಶಿ, ಅಶೋಕ್ ಮತ್ತು ವಿಜಯೇಂದ್ರ ಅವರನ್ನು ಬದಿಗೆ ಸರಿಸಿ ಅದ್ರಿಂದ ತಮಗೇನಾದ್ರು ರಾಜಕೀಯ ಲಾಭವಾಗಬಹುದೇನೋ ಅನ್ನೋ ಲೆಕ್ಕಾಚಾರದಲ್ಲಿ ಕುಮಾರಸ್ವಾಮಿ ದಿನಕ್ಕೊಂದು ಹೇಳಿಕೆ ನೀಡುತ್ತಿದ್ದಾರೆ ಎಂದು ಆರೋಪಿಸಿದರು. ಬರೀ ಬುಟ್ಟಿ ಬೇವಿನ ಸೊಪ್ಪು, ನಂದೇ ಬೆಳಗು ಪೂಜಾರಿ ಎಂಬ ರೀತಿಯಲ್ಲಿ ರಾಜಕೀಯ ಮಾಡುತ್ತಿದ್ದಾರೆ ಎಂದು ಡಿಕೆಶಿ ಟಾಂಗ್ ನೀಡಿದ್ರು.
ಅಲ್ಲೋಲ-ಕಲ್ಲೋಲ ಮಾಡಿಬಿಡ್ತೇನೆ
ಕುಮಾರಸ್ವಾಮಿ ಅವರಿಗೆ ಕೇಂದ್ರದಲ್ಲಿ ದೊಡ್ಡ ಮಂತ್ರಿ ಸ್ಥಾನ ಸಿಕ್ಕಿದೆ. ಅದರ ಮೂಲಕ ಕರ್ನಾಟಕದ 50 ಸಾವಿರ ಜನರಿಗೆ ಉದ್ಯೋಗ ಸಿಗುವಂತೆ ಮಾಡಲಿ. ಅವರಿಗೆ ಎಲ್ಲಿ ಬೇಕೋ ಅಲ್ಲಿ, ಮಂಡ್ಯದಲ್ಲೇ ಬೇಕಾದರೂ ಭೂಸ್ವಾಧೀನ ಮಾಡಿ ಕೊಡೋಣ. ಆದರೆ ನನ್ನನ್ನು ಅಧಿಕಾರದಿಂದ ಇಳಿಸಿಬಿಡ್ತೇನೆ, ದೆಹಲಿಯಿಂದ ಬಾಂಬ್ ಹಾಕಿಬಿಡ್ತೇನೆ, ಅಲ್ಲೋಲ-ಕಲ್ಲೋಲ ಮಾಡಿಬಿಡ್ತೇನೆ ಅಂತ ಹೇಳುತ್ತಿದ್ದಾರೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀವ್ರ ವ್ಯಂಗ್ಯವಾಡಿದ್ದಾರೆ.
ಇದನ್ನೂ ಓದಿ:
ತಮ್ಮ ವಿರುದ್ಧ ನಿಖೆ ನಡೆಸಿದರೂ ಎದುರಿಸಲು ಸಿದ್ಧ
ತಮ್ಮ ವಿರುದ್ಧ ಯಾವುದೇ ತನಿಖೆ ನಡೆಸಿದರೂ ಎದುರಿಸಲು ಸಿದ್ಧ ಎಂದು ಹೇಳಿದ ಅವರು, ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳದೆ ಜನರ ಒಳಿತಿಗಾಗಿ ಬಳಸಬೇಕು ಎಂಬುದು ತಮ್ಮ ಬದ್ಧತೆ ಎಂದರು. ತಮ್ಮನ್ನು ಸೀಳಿ ಹಾಕಲಿ, ಸಿಬಿಐಗೆ ಕರೆದೊಯ್ಯಲಿ, ಯಾವುದೇ ತನಿಖೆ ನಡೆಸಲಿ ಎಂದು ಸವಾಲು ಹಾಕಿದರು.



