September 14, 2026
Monday, September 14, 2026
spot_img

WEATHER | ರಾಜ್ಯಕ್ಕೆ ವರುಣನ ಎಂಟ್ರಿ: ಇಂದು ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಗುಡುಗು-ಬಿರುಗಾಳಿ ಸಹಿತ ಮಳೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜ್ಯದಲ್ಲಿ ನೈರುತ್ಯ ಮುಂಗಾರು ಮಾರುತಗಳ ಆರ್ಭಟ ಕೊಂಚ ಕಡಿಮೆಯಾಗಿದ್ದರೂ, ಇಂದು ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಗುಡುಗು- ಬಿರುಗಾಳಿಯ ಸಹಿತ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.  

ರಾಜಧಾನಿಯಲ್ಲಿ ಇಂದು ದಿನವಿಡೀ ಮೋಡ ಕವಿದ ವಾತಾವರಣವಿರಲಿದ್ದು,. ಸಂಜೆ ವೇಳೆಗೆ ಸಾಧಾರಣ ಮಳೆ ಸುರಿಯಬಹುದು. ಎಂದು ಇಲಾಖೆ ತಿಳಿಸಿದೆ.

ಎಲ್ಲೆಲ್ಲಿ ಮಳೆಯಾಗಲಿದೆ?

ದಕ್ಷಿಣ ಒಳನಾಡಿನ ಪ್ರಮುಖ ಜಿಲ್ಲೆಗಳಾದ ಬೆಂಗಳೂರು ನಗರ, ಗ್ರಾಮಾಂತರ, ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ ಮತ್ತು ಕೊಡಗು ಸೇರಿದಂತೆ ಒಟ್ಟು 9 ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಈ ಸಂದರ್ಭದಲ್ಲಿ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಬಲವಾದ ಬಿರುಗಾಳಿ ಬೀಸುವ ಎಚ್ಚರಿಕೆ ನೀಡಲಾಗಿದೆ. ಇದಲ್ಲದೆ ಉತ್ತರ ಕರ್ನಾಟಕದ ಬೀದರ್, ಕಲಬುರಗಿ ಹಾಗೂ ರಾಯಚೂರಿನ ಕೆಲವೆಡೆ ಹಗುರ ಮಳೆಯಾಗಬಹುದು.

ಉಳಿದ ಭಾಗಗಳಲ್ಲಿ ಒಣ ಹವೆ

ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಸದ್ಯಕ್ಕೆ ಮಳೆಯ ಕೊರತೆಯಿದ್ದು, ದಿನವಿಡೀ ಸೆಖೆ ಹಾಗೂ ಉರಿ ಬಿಸಿಲು ಮುಂದುವರಿಯಲಿದೆ. ಮೀನುಗಾರರಿಗೆ ಯಾವುದೇ ಕಡಲ ಮುನ್ನೆಚ್ಚರಿಕೆ ನೀಡಿಲ್ಲ. ಇನ್ನು ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ ಹಾಗೂ ಬಾಗಲಕೋಟೆ ಭಾಗಗಳಲ್ಲಿ ಬಿಸಿಲಿದ್ದರೂ ಅಲ್ಲಲ್ಲಿ ಮೋಡಗಳು ಕಾಣಿಸಿಕೊಳ್ಳಲಿವೆ ಎಂದು ಇಲಾಖೆ ಸೂಚನೆ ನೀಡಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !