ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೂತನ ನಿವಾಸದ ಗೃಹಪ್ರವೇಶ ಸಮಾರಂಭವು ಇಂದು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅತ್ಯಂತ ವಿಜೃಂಭಣೆಯಿಂದ ನೆರವೇರಿತು. ನಗರದ ಪ್ರಮುಖ ಬಡಾವಣೆಯಾದ ಕುವೆಂಪುನಗರದಲ್ಲಿ ನೂತನ ಮನೆಯನ್ನು ನಿರ್ಮಿಸಲಾಗಿದ್ದು, ಸಿದ್ದರಾಮಯ್ಯ ಅವರು ತಮ್ಮ ಇಡೀ ಕುಟುಂಬದ ಸದಸ್ಯರ ಸಮ್ಮುಖದಲ್ಲಿ ಹೊಸ ಮನೆಗೆ ಪಾದಾರ್ಪಣೆ ಮಾಡಿದರು.
ಶಾಸ್ತ್ರೋಕ್ತ ಧಾರ್ಮಿಕ ವಿಧಿವಿಧಾನಗಳು
ಗೃಹಪ್ರವೇಶದ ಹಿನ್ನೆಲೆಯಲ್ಲಿ ಭಾನುವಾರ (ಸೆ.13) ರಾತ್ರಿಯಿಂದಲೇ ವಿವಿಧ ಸಾಂಪ್ರದಾಯಿಕ ಹಾಗೂ ಧಾರ್ಮಿಕ ಪೂಜಾ ಕೈಂಕರ್ಯಗಳು ಆರಂಭಗೊಂಡಿದ್ದವು. ಇಂದು ಮುಂಜಾನೆ ನೂತನ ಗೃಹದಲ್ಲಿ ಗಣಹೋಮ, ಲಕ್ಷ್ಮಿ ಪೂಜೆ ಸೇರಿದಂತೆ ಹಲವು ವಿಶೇಷ ಪೂಜೆಗಳೊಂದಿಗೆ ಶಾಸ್ತ್ರೋಕ್ತವಾಗಿ ನಡೆಸಲಾಯಿತು.
ಇದನ್ನೂ ಓದಿ:
ಕುಟುಂಬಸ್ಥರ ಭಾಗಿ
ಈ ಶುಭ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಧರ್ಮಪತ್ನಿ ಪಾರ್ವತಿಸಿದ್ದರಾಮಯ್ಯ, ಪುತ್ರ ಹಾಗೂ ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ ಸಿದ್ದರಾಮಯ್ಯ ಅವರ ಕುಟುಂಬದ ಆಪ್ತರು ಹಾಗೂ ಎಲ್ಲ ಸದಸ್ಯರು ಪಾಲ್ಗೊಂಡು ಹೊಸ ಮನೆಯ ಪೂಜಾ ಕಾರ್ಯಕ್ರಮಗಳಲ್ಲಿ ಭಾಗಿಯಾದರು. ನೂತನ ನಿವಾಸದ ಗೃಹಪ್ರವೇಶದ ಹಿನ್ನೆಲೆಯಲ್ಲಿ ಕುವೆಂಪುನಗರದ ಮನೆಯ ಆವರಣದಲ್ಲಿ ಹಬ್ಬದ ಕಳೆ ಮನೆ ಮಾಡಿತ್ತು.



