ಹೊಸದಿಗಂತ ಡಿಜಿಟಲ್ ಡೆಸ್ಕ್:
ವೈದ್ಯಾಧಿಕಾರಿ ಹುದ್ದೆಯಲ್ಲಿದ್ದುಕೊಂಡೇ ವೈದ್ಯಕೀಯ ಸ್ನಾತಕೋತ್ತರ ವ್ಯಾಸಂಗ ಮಾಡುತ್ತಿದ್ದ ಆರೋಪ ಎದುರಿಸುತ್ತಿದ್ದ ಹಾಲಿ ಶಾಸಕ ಉಮೇಶ್ ಮೇಟಿ ಅವರ ಸೊಸೆ ಡಾ. ಅಂಕಿತಾ ಯರಗಲ್ ಅವರನ್ನು ಗುತ್ತಿಗೆ ಸೇವೆಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಬಿಡುಗಡೆಗೊಳಿಸಲಾಗಿದೆ.
ವಾಂಬೆ ಕಾಲೋನಿಯ ನಮ್ಮ ಕ್ಲಿನಿಕ್‌ನಲ್ಲಿ ವೈದ್ಯಾಧಿಕಾರಿಯಾಗಿ ನಿಯೋಜಿತರಾಗಿದ್ದ ಅಂಕಿತಾ ಅವರು ನಿಯಮಿತವಾಗಿ ಕರ್ತವ್ಯಕ್ಕೆ ಹಾಜರಾಗದೆ, ಹಾಜರಾತಿ ಪುಸ್ತಕದಲ್ಲಿ ಸಹಿ ಹಾಕಿ 75 ಸಾವಿರ ಸರ್ಕಾರಿ ವೇತನ ಪಡೆಯುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಇಲಾಖೆಯ ಗಮನಕ್ಕೆ ತರದೆ PG ವ್ಯಾಸಂಗ ಮಾಡುತ್ತಿದ್ದರೆಂಬ ಆರೋಪವೂ ಇತ್ತು.
ಕಳೆದ ಆಗಸ್ಟ್ 28 ರಿಂದ ಅವರು ಅನಧಿಕೃತವಾಗಿ ಕರ್ತವ್ಯಕ್ಕೆ ಗೈರಾಗಿದ್ದರು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಈ ಬಗ್ಗೆ ಮೇಲಧಿಕಾರಿಗಳಿಗೆ ಮಾಹಿತಿ ನೀಡಿರಲಿಲ್ಲ ಎನ್ನಲಾಗಿದೆ.



