ಹೊಸದಿಗಂತ ಡಿಜಿಟಲ್ ಡೆಸ್ಕ್:
ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ ವಾಪಸ್ ಆಗುತ್ತಿದ್ದ ಒಂದೇ ಕುಟುಂಬದ ನಾಲ್ವರು ಜವರಾಯನ ಅಟ್ಟಹಾಸಕ್ಕೆ ಬಲಿಯಾದ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೊಪ್ಪ ಬಳಿ ನಡೆದಿದೆ.
ಮೃತಪಟ್ಟವರನ್ನು ಬೆಂಗಳೂರಿನ ಮುತ್ತುರಾಜ್ (35), ಕಾವ್ಯ (30) ಹಾಗೂ ಕೀರ್ತನಾ (8) ಎಂದು ಗುರುತಿಸಲಾಗಿದೆ.
ಇದನ್ನೂ ಓದಿ:
ನಾಲ್ವರು ಸ್ಕೂಟರ್ನಲ್ಲಿ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಹಿಂದಿನಿಂದ ಬಂದ ಹಾಲಿನ ಟ್ಯಾಂಕರ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತದ ರಭಸಕ್ಕೆ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಮಗು ಗಂಭೀರವಾಗಿ ಗಾಯಗೊಂಡಿದೆ. ಡಿಕ್ಕಿ ಹೊಡೆದ ಬಳಿಕ ಅಪರಿಚಿತ ವಾಹನ ನಿಲ್ಲಿಸದೆ ಪರಾರಿಯಾಗಿದೆ.
ಘಟನೆ ಕುರಿತು ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿಯಾಗಿರುವ ವಾಹನ ಹಾಗೂ ಚಾಲಕನ ಪತ್ತೆಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.



