September 15, 2026
Tuesday, September 15, 2026
spot_img

ಅಂಕೋಲಾ ಕಡೆಗೆ ಹೋಗುತ್ತಿದ್ದ ಕ್ರೂಸರ್‌ ಓವರ್‌ಟೇಕ್‌ ಮಾಡಲು ಹೊರಟಿದ್ದ ಬೈಕ್‌ ಅಪಘಾತ: ಕೂಲಿ ಕಾರ್ಮಿಕ ಸಾ*ವು

ಹೊಸದಿಗಂತ ವರದಿ ಯಲ್ಲಾಪುರ:

ಯಲ್ಲಾಪುರ ದಿಂದ ಅಂಕೋಲಾ ಕಡೆಗೆ ಹೋಗುತ್ತಿದ್ದ ಕ್ರೂಸರ್ ವಾಹನವನ್ನು ಓವರ್‌ಟೇಕ್ ಮಾಡಲು ಹೋಗಿ, ಕಮ್ಮಾಣಿಯ ಕೂಲಿ ಕಾರ್ಮಿಕ 22 ವರ್ಷದ ಮಹೇಶ ಸಿದ್ದಿ ಚಲಾಯಿಸುತ್ತಿದ್ದ ಬೈಕಿಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ಮಹೇಶ ಸಿದ್ದಿ ಗಂಭೀರವಾಗಿ ಗಾಯಗೊಂಡಿದ್ದರು.

ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸೋಮವಾರ ಮೃತಪಟ್ಟಿದ್ದಾರೆ.
ಆರೋಪಿ ಅಭಿಷೇಕ ಹರಸಂಬಿ ವಿರುದ್ಧ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !