ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ಗೆ ಮತ್ತೊಂದು ಹಿನ್ನಡೆಯಾಗಿದೆ. ಪ್ರಕರಣದ ಆರೋಪಿಯಾಗಿರೋ ಪ್ರದೋಷ್ ಅವರನ್ನು ಮಾಫಿ ಸಾಕ್ಷಿಯನ್ನಾಗಿ ಮಾಡುವ ಪ್ರಕ್ರಿಯೆಗೆ 59ನೇ ಸಿಸಿಹೆಚ್ ಕೋರ್ಟ್ ಒಪ್ಪಿಗೆ ಸೂಚಿಸಿದೆ.
ದರ್ಶನ್ ಅರ್ಜಿ ತಿರಸ್ಕಾರ
ಪ್ರದೋಷ್ ವಿರುದ್ಧ ದೂರು ದಾಖಲಾಗುತ್ತಿದ್ದಂತೆ, ಅವರನ್ನು ಮಾಫಿ ಸಾಕ್ಷಿಯನ್ನಾಗಿ ಮಾಡುವ ಪ್ರಕ್ರಿಯೆಗೆ ತಡೆ ನೀಡುವಂತೆ ನಟ ದರ್ಶನ್ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ಮಾಫಿ ಸಾಕ್ಷಿ ಪ್ರಕ್ರಿಯೆ ಮುಂದೂಡುವಂತೆ ದರ್ಶನ್ ಮಾಡಿದ್ದ ಮನವಿಯನ್ನು ತಿರಸ್ಕರಿಸಿದೆ.
ನ್ಯಾಯಾಧೀಶೆ ಸುಜಾತಾ ಮಡಿವಾಳಪ್ಪ ಸಾಂಬ್ರಾಣಿ ಅವರು ದರ್ಶನ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ, ಪ್ರದೋಷ್ ಮಾಫಿ ಸಾಕ್ಷಿಯಾಗುವ ಪ್ರಕ್ರಿಯೆಗೆ ಅನುಮತಿ ನೀಡಿದ್ದಾರೆ.
ಇದೀಗ ಸೆಷನ್ಸ್ ಕೋರ್ಟ್ ಹೊಸ ಆದೇಶ ನೀಡಿದ್ದು, ಮುಂದಿನ ಪ್ರಕ್ರಿಯೆಗಾಗಿ ಶೀಘ್ರದಲ್ಲೇ ದಿನಾಂಕ ನಿಗದಿಪಡಿಸುವ ಸಾಧ್ಯತೆ ಇದೆ.



