ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು ಕಾಶ್ಮೀರದ ಉಧಂಪುರದಲ್ಲಿ ಭದ್ರತಾ ಪಡೆಗಳು ಬುಧವಾರ ರಾತ್ರಿ ಹಾಗೂ ಗುರುವಾರ ಬೆಳಗಿನ ಜಾವ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಇಬ್ಬರು ಭಯೋತ್ಪಾದಕರನ್ನು ಸದೆಬಡೆದಿದ್ದಾರೆ. ಕಾರ್ಯಾಚರಣೆ ಇನ್ನೂ ಜಾರಿಯಲ್ಲಿದೆ.
ನಿನ್ನೆ ತಡರಾತ್ರಿ ಉಧಂಪುರದ ಮಜಲ್ತಾ ವ್ಯಾಪ್ತಿಯ ಸೋಹನ್ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿತ್ತು. ಇದರ ಹಿನ್ನೆಲೆ ಭದ್ರತಾ ಪಡೆಗಳು ಜಂಟಿ ಶೋಧ ಕಾರ್ಯಾಚರಣೆ ಆರಂಭಿಸಿದ್ದವರು. ಉಗ್ರರು ಇದ್ದಕ್ಕಿದ್ದಂತೆಯೇ ಭದ್ರತಾ ಪಡೆಗಳ ಮೇಲೆ ದಾಳಿ ಆರಂಭಿಸಿದ್ದರು. ತಕ್ಷಣವೇ ಭಾರತೀಯ ಸೇನೆ ತಕ್ಕ ಉತ್ತರ ನೀಡಿದ್ದು, ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ.
ಹತರಾದ ಭಯೋತ್ಪಾದಕರ ಹೆಸರೇನು? ಅವರು ಯಾವ ಗುಂಪಿಗೆ ಸೇರಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿಲ್ಲ. ಸದ್ಯ ಉಧಂಪುರದಲ್ಲಿ ಬೂದಿ ಮುಚ್ಚಿದ ಕೆಂಡದಂತಹ ವಾತಾವರಣವಿದೆ. ಭದ್ರತಾ ಪಡೆಗಳು ಸುತ್ತಲೂ ಬಿಗಿ ಕಾವಲು ನಿಯೋಜಿಸಿವೆ.



