ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ವಿವಿಧ ಭಾಗಗಳಲ್ಲಿ ಸೆಪ್ಟೆಂಬರ್ ಮಧ್ಯಭಾಗದಿಂದ ವಾತಾವರಣವೇ ಬದಲಾಗಿದೆ. ಸಂಜೆವರೆಗೂ ಮಾಮೂಲಿಯಂತಿರುವ ವಾತಾವರಣ ಸಂಜೆ ನಂತರ ಬದಲಾಗಲಿದೆ. ಕಪ್ಪು ಮೋಡ ಹಾಗೂ ಗುಡುಗು ಸಹಿತ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಸಂಭವಿಸಲಿದ್ದು, ಇದರ ಪರಿಣಾಮವಾಗಿ ಕರ್ನಾಟಕದ ಮಲೆನಾಡು, ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆ ಇದೆ.
ಎಲ್ಲೆಲ್ಲಿ ಮಳೆ?
ಬೆಂಗಳೂರು
ಮೈಸೂರು
ಮಂಡ್ಯ
ರಾಮನಗರ
ಚಾಮರಾಜನಗರ
ಶಿವಮೊಗ್ಗ
ಚಿಕ್ಕಮಗಳೂರು
ನಾಳೆ ರಾಜ್ಯದ ಕರಾವಳಿ, ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆ ಬೀಳಲಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳ ಹಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.



