September 19, 2026
Saturday, September 19, 2026
spot_img

ಕದ್ರಿ ಶ್ರೀ ಕ್ಷೇತ್ರದ ಮಂಜುನಾಥಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿಶೇಷ ಪೂಜೆ ಸಮರ್ಪಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಮಂಗಳೂರಿನ‌ ಪ್ರಜಾಸೌಧದಲ್ಲಿ ಇಂದು ನಡೆಯುವ ಸಚಿವ ಸಂಪುಟ ಸಭೆಗೂ ಮುನ್ನ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ತಮ್ಮ ಸಂಪುಟ ಸಹೋದ್ಯೋಗಿಗಳ ಜತೆ ಮಂಗಳೂರಿನ ಕದ್ರಿಯ ಮಂಜುನಾಥ ಸ್ವಾಮಿ ದೇಗುಲಕ್ಕೆ ಶುಕ್ರವಾರ ಭೇಟಿ ನೀಡಿ ಪೂಜೆ ಸಲ್ಲಿಸಿದರು.

ಮಂಗಳೂರಿನಲ್ಲಿ ಪ್ರಥಮ ಬಾರಿಗೆ ಇಂದು ಸಚಿವ ಸಂಪುಟ ಸಭೆ ನಡೆಯಲಿದ್ದು, ಕ್ಷಣಗಣನೆ ಆರಂಭವಾಗಿದೆ. 12.30 ರ ವೇಳೆಗೆ ಸಚಿವ ಸಂಪುಟ ಸಭೆ ನಡೆಯುವ ಸಾಧ್ಯತೆ ಇದೆ.  ಅದಕ್ಕೂ ಮುನ್ನ ಇಂದು ಬೆಳಗ್ಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಸಚಿವರೆಲ್ಲರೂ ಕದ್ರಿ ಶ್ರೀ ಮಂಜುನಾಥ ದೇವಸ್ಥಾನಕ್ಕೆ ತೆರಳಿ ದೇವರ ದರುಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಅಲ್ಲಿಂದ ತರೆದ ವಾಹನದ ಮೂಲಕ ಸಚಿವ ಸಂಪುಟ ಸಭೆ ನಡೆಯುವ ಪ್ರಜಾಸೌಧಕ್ಕೆ ಆಗಮಿಸಲಿದ್ದಾರೆ.

ನಗರದ ಇಕ್ಕೆಲಗಳಲ್ಲಿ ಸಚಿವರ ದಂಡನ್ನು ಸ್ವಾಗತಿಸಲು ಜನತೆ ಸಾಲುಗಟ್ಟಿ ನಿಂತಿದ್ದು, ನಗರದಲ್ಲಿ ಹಬ್ಬದ ವಾತಾವತಣ ನಿರ್ಮಾಣವಾಗಿದೆ. ಅಲ್ಲಲ್ಲಿ ಎದುರುಗೊಳ್ಳುವಿವಿಧ ಕಲಾ ತಂಡಗಳು ಮೆರುಗು ಹೆಚ್ಚಿಸಿವೆ.

ಇದನ್ನೂ ಓದಿ:

ಉಡುಪಿ ಸೇರಿದಂತೆ ಕರಾವಳಿ ಭಾಗದ ಸಮಗ್ರ ಅಭಿವೃದ್ಧಿಯ ನೆಲೆಯಲ್ಲಿ ಮಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಸಚಿವ ಸಂಪುಟ ಸಭೆ ನಡೆಯುತ್ತಿದೆ. ಈ ಐತಿಹಾಸಿಕ ಕ್ಷಣವನ್ನು ದಾಖಲಿಸಿಕೊಳ್ಳಲು ಪಡೀಲ್‌ನಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಕಟ್ಟಡ ‘ಪ್ರಜಾಸೌಧ’ ಸಜ್ಜುಗೊಂಡಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !