September 19, 2026
Saturday, September 19, 2026
spot_img

ಮಲೆನಾಡಿಗರ ಆತಂಕಕ್ಕೆ ಕೊನೆಗೂ ಸಿಗುತ್ತಾ ಮುಕ್ತಿ? ನಾಳೆ ಸಕಲೇಶಪುರಕ್ಕೆ ಸಿಎಂ ಡಿ.ಕೆ.ಶಿವಕುಮಾರ್ ಭೇಟಿ

ಹೊಸದಿಗಂತ ವರದಿ ಹಾಸನ:

ಕಸ್ತೂರಿರಂಗನ್ ವರದಿ ಜಾರಿಗೆ ಸಂಬಂಧಿಸಿದಂತೆ ಮಲೆನಾಡು ಭಾಗದ ಜನರ ಆತಂಕ, ಆಕ್ಷೇಪಣೆಗಳನ್ನು ಆಲಿಸಲು ಹಾಗೂ ಕ್ಷೇತ್ರದ ಸಮಗ್ರ ಅಭಿವೃದ್ಧಿ ಕುರಿತು ಚರ್ಚಿಸಲು ಇದೇ ಸೆ. 20 ರ ಭಾನುವಾರದಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಸನ ಜಿಲ್ಲೆಯ ಸಕಲೇಶಪುರ ಪಟ್ಟಣಕ್ಕೆ ಆಗಮಿಸಲಿದ್ದಾರೆ .

ಸಕಲೇಶಪುರ ಪಟ್ಟಣದ ಎಪಿಎಂಸಿ ಆವರಣದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕಾರ ಸಭೆ ನಡೆಯಲಿದೆ. ರಾಜಕೀಯ ಪಕ್ಷಗಳು, ರೈತ ಸಂಘಟನೆಗಳು, ವಿವಿಧ ಸಂಘ-ಸಂಸ್ಥೆಗಳು ಹಾಗೂ ಸಾರ್ವಜನಿಕರು ಮುಖ್ಯಮಂತ್ರಿಗಳಿಗೆ ನೇರವಾಗಿ ಮನವಿ ಸಲ್ಲಿಸಲು ಮುಕ್ತ ಅವಕಾಶ ಕಲ್ಪಿಸಲಾಗಿದೆ.

ಪಕ್ಷಾತೀತವಾಗಿ ಬಿಜೆಪಿ, ಜೆಡಿಎಸ್ ಸೇರಿದಂತೆ ಎಲ್ಲ ರಾಜಕೀಯ ಪಕ್ಷಗಳು, ರೈತ ಸಂಘಟನೆಗಳು, ಎನ್‌ಜಿಒಗಳು, ರೋಟರಿ, ಲಯನ್ಸ್ ಸಂಸ್ಥೆಗಳು ಹಾಗೂ ದಲಿತ ಸಂಘರ್ಷ ಸಮಿತಿಯ ಮುಖಂಡರು ಅಹವಾಲು ಸಲ್ಲಿಸಬಹುದು. ಸಾರ್ವಜನಿಕರ ಅನುಕೂಲಕ್ಕಾಗಿ ವೇದಿಕೆ ಬಳಿ ಪ್ರತ್ಯೇಕ ಕೌಂಟರ್ ತೆರೆಯಲಾಗುತ್ತದೆ, ಎಂದು ಕಾಂಗ್ರೆಸ್ ಮುಖಂಡರು ತಿಳಿಸಿದ್ದಾರೆ.

ಸಭೆಯಲ್ಲಿ ಅರಣ್ಯ ಸಚಿವ ರಾಮಲಿಂಗಾರೆಡ್ಡಿ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ, ಸಂಸದ ಶ್ರೇಯಸ್ ಪಟೇಲ್ ಮತ್ತಿತರ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !